ಮನೆಗಳ ಮುಂದೆ ನಿಲ್ಲಿಸಿದ ಕಾರುಗಳ ಮೇಲೆ ಕಲ್ಲು ತೂರಾಟ; ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ – Kannada News | Man Pelts Stone On Parked Cars At Bharath Colony In Davangere, Incident Caught On CCTV

ದಾವಣಗೆರೆ, ಜನವರಿ 21: ಭರತ್ ಕಾಲೋನಿಯಲ್ಲಿ ಡೇವಿಡ್ ಎಂಬ ವ್ಯಕ್ತಿ ನಿಲ್ಲಿಸಿದ್ದ ಕಾರುಗಳ ಮೇಲೆ ಪದೇ ಪದೇ ಕಲ್ಲು ತೂರಾಟ ನಡೆಸುತ್ತಿದ್ದು, ಐದಾರು ವಾಹನಗಳಿಗೆ ಹಾನಿಯಾಗಿದೆ. ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಡೇವಿಡ್ ಕಲ್ಲು ತೂರಿ ಓಡಿಹೋಗುವ ದೃಶ್ಯ ಸ್ಪಷ್ಟವಾಗಿ ಗೋಚರಿಸಿದೆ. ಆರ್‌ಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ. ಈ ಹಿಂದೆಯೂ ಡೇವಿಡ್ ಇಂತಹ ಕೃತ್ಯಗಳನ್ನು ಎಸಗಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಬೈಕ್‌ಗಳಿಗೆ ಹಾನಿ ಮಾಡಿದ ಪ್ರಕರಣಗಳೂ ದಾಖಲಾಗಿದ್ದವು ಎಂದು ತಿಳಿದು ಬಂದಿದೆ. ಪೊಲೀಸರು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರ ಜೊತೆಗೆ ಈ ರೀತಿಯ ಘಟನೆಗಳು ಮರುಕಳಿಸದಂತೆ ತಡೆಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *