Headlines

ಮನೆ ಒಳಗೇ ಲಗ್ಗೆ ಇಟ್ಟು ಜಗುಲಿಯಲ್ಲಿದ್ದ ನಾಯಿಯ ಹೊತ್ತೊಯ್ದ ಚಿರತೆ: ಸಿಸಿಟಿವಿ ವಿಡಿಯೋ ವೈರಲ್ – Kannada News | Leopard Attacks Pet Dog in Didupe Belthangady, CCTV Footage Shocks Villagers in Dakshina Kannada

ಮಂಗಳೂರು, ಫೆಬ್ರವರಿ 7: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ ಗ್ರಾಮದ ಕೊಂಡಾಳು ಪ್ರದೇಶದಲ್ಲಿ ಚಿರತೆ ದಾಳಿ ನಡೆಸಿ ಸಾಕು ನಾಯಿಯನ್ನು ಹೊತ್ತೊಯ್ದ ಘಟನೆ ನಡೆದಿದೆ. ನಾರಾಯಣ ಗೌಡ ಎಂಬವರ ಮನೆಯ ಹೊರ ಜಗುಲಿಯಲ್ಲಿ ಮಲಗಿದ್ದ ನಾಯಿಯನ್ನು ರಾತ್ರಿ ವೇಳೆ ಚಿರತೆ ಹೊಂಚು ಹಾಕಿ ಕಚ್ಚಿ ಎಳೆದೊಯ್ದಿದೆ. ಚಿರತೆ ಮನೆಯಂಗಳಕ್ಕೆ ನುಗ್ಗಿದ ವೇಳೆ ಅಲ್ಲೇ ಮಲಗಿದ್ದ ಬೆಕ್ಕು ಅದೃಷ್ಟವಶಾತ್ ಚಿರತೆಯ ಬಾಯಿಂದ ತಪ್ಪಿಸಿಕೊಂಡಿದೆ. ನಾಯಿಯನ್ನು ಹೊತ್ತೊಯ್ದ ದೃಶ್ಯ ಮನೆಯ ಮುಂಭಾಗ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.

ಈ ಘಟನೆ ಬಳಿಕ ದಿಡುಪೆ ಗ್ರಾಮಸ್ಥರಲ್ಲಿ ಭೀತಿ ಮನೆ ಮಾಡಿದ್ದು, ರಾತ್ರಿ ವೇಳೆ ಮನೆ ಹೊರಗೆ ಹೋಗಲು ಜನರು ಹೆದರುತ್ತಿದ್ದಾರೆ. ಈ ಹಿಂದೆ ಸಹ ದಿಡುಪೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಕು ಪ್ರಾಣಿಗಳನ್ನು ಚಿರತೆ ಹೊತ್ತೊಯ್ದ ಘಟನೆಗಳು ನಡೆದಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ. ಚಿರತೆಯ ಸಂಚರಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಂಡು ಪ್ರಾಣಿಯನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *