ಬೆಂಗಳೂರು, ಆಗಸ್ಟ್ 14: ಗ್ರೇಟರ್ ಬೆಂಗಳೂರು ಅಥಾರಿಟಿ ಜಾರಿಗೊಳಿಸಿರುವ ಹೊಸ ಪಾರ್ಕಿಂಗ್ ನಿಯಮಗಳು ನಗರದ ವಾಹನ ಸವಾರರಿಗೆ ತೀವ್ರ ಆಘಾತ ಉಂಟು ಮಾಡಿವೆ. ಮನೆ ಮುಂದೆ ವಾಹನ ನಿಲ್ಲಿಸಲು ತಿಂಗಳಿಗೆ 15 ಸಾವಿರ ರೂ ಶುಲ್ಕ ಪಾವತಿಸಿ ಪಾಸ್ ಪಡೆಯಬೇಕೆಂಬ ನಿಯಮಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಗರದಲ್ಲಿ ಬಹುತೇಕ ಸಣ್ಣ ನಿವೇಶನಗಳು ಹಾಗೂ ಬಾಡಿಗೆ ಮನೆಗಳಲ್ಲಿ ಸ್ವಂತ ಪಾರ್ಕಿಂಗ್ ಸ್ಥಳಾವಕಾಶ ಇಲ್ಲದಿರುವಾಗ, ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಏಕಾಏಕಿ ಇಷ್ಟೊಂದು ದುಬಾರಿ ಶುಲ್ಕ ವಿಧಿಸುವುದು ಜನಸಾಮಾನ್ಯರಿಗೆ ಹೊರೆಯಾಗಲಿದೆ ಎಂದು ಜನರು ಕಿಡಿಕಾರಿದ್ದಾರೆ. ಈಗಾಗಲೇ ಪಾಲಿಕೆಗೆ ವಿವಿಧ ತೆರಿಗೆಗಳನ್ನು ಪಾವತಿಸುತ್ತಿದ್ದು, ಜಿಬಿಎ ಮೊದಲು ನಗರದಲ್ಲಿ ವಾಹನ ನಿಲುಗಡೆಗೆ ಸೂಕ್ತ ಪರ್ಯಾಯ ಮೂಲಸೌಕರ್ಯಗಳನ್ನು ರೂಪಿಸಿ, ಆ ಬಳಿಕ ನಾಮಮಾತ್ರದ ದರ ನಿಗದಿಪಡಿಸಬೇಕು ಎಂದು ಸಾರ್ವಜನಿಕರು ಹಾಗೂ ವಾಹನ ಮಾಲೀಕರು ಆಗ್ರಹಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.