ಮರಗಳು ಧರೆಗೆ, ನೀರು ರಸ್ತೆಗೆ: ಬೆಂಗಳೂರಿನಲ್ಲಿ ಮಳೆಯ ಅವಾಂತರಗಳು ಒಂದೆರಡಲ್ಲ – Kannada News | Bengaluru Rains: Wreak Havoc; Trees Uprooted, Roads Flooded Across City

ಗಾಳಿ ಮಳೆಯಿಂದಾಗಿ ಅವಾಂತರImage Credit source: tv9 kannada

ಬೆಂಗಳೂರು, ಮೇ 21: ರಾಜಧಾನಿ ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ವಾತಾವರಣ ಬದಲಾಗಿದ್ದು, ಮಹಾನಗರದ ಬಹುತೇಕ ಭಾಗಗಳಲ್ಲಿ ಬಿರುಗಾಳಿ ಮತ್ತು ಆಲಿಕಲ್ಲು ಸಹಿತ ಧಾರಾಕಾರ ಮಳೆ ಸುರಿದಿದೆ. ಕರಾವಳಿ ಮತ್ತು ಒಳನಾಡಿನಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿರುವ ಬೆನ್ನಲ್ಲೇ ಇತ್ತ ಸಿಟಿ ಜನರಿಗೆ ವರುಣ ತಂಪೆರೆದಿದ್ದಾನೆ. ಇನ್ನು ದಿಢೀರ್ ಮಳೆಯಿಂದಾಗಿ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ಸಾರ್ವಜನಿಕರು ಮತ್ತು ಸವಾರರು ತೀವ್ರ ಪರದಾಡುವಂತಾಗಿದೆ.

ಏಲ್ಲೆಲ್ಲಿ ಮಳೆ?

ವಿಜಯನಗರ, ಶಾಂತಿನಗರ, ಲಾಲ್​ಬಾಗ್, ಕಬ್ಬನ್​ಪಾರ್ಕ್​, ಕೆ.ಆರ್.ಮಾರ್ಕೆಟ್, ಜಯನಗರ, ರಾಜಾಜಿನಗರ, ವಸಂತನಗರ, ವಿಧಾನಸೌಧ, ಮೈಸೂರು ರಸ್ತೆ, ಮಾಗಡಿ ರಸ್ತೆ, ಬಸವೇಶ್ವರನಗರ, ಮಲ್ಲೇಶ್ವರಂ, ಮೆಜೆಸ್ಟಿಕ್, ವಿಲ್ಸನ್​ಗಾರ್ಡನ್, ಮೆಜೆಸ್ಟಿಕ್​ ಸುತ್ತಮುತ್ತ, ಮೈಸೂರು ಬ್ಯಾಂಕ್ ವೃತ್ತ, ಕನ್ನಿಂಗ್​ಹ್ಯಾಮ್ ರಸ್ತೆಯಲ್ಲಿ ಆಲಿಕಲ್ಲು ಸಹಿತ ಮಳೆ ಸುರಿದಿದೆ.

ಬಸ್ ನಿಲ್ದಾಣ, ಸ್ಕೈವಾಕ್‌ಗಳೇ ಆಶ್ರಯ

ಧಾರಾಕಾರ ಮಳೆ ಹಿನ್ನೆಲೆ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಪರದಾಡುವಂತಾಗಿದೆ. ಕನ್ನಿಂಗ್‌ಹ್ಯಾಮ್ ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳ ಬದಿಯಲ್ಲಿ ಬೈಕ್‌ಗಳನ್ನು ನಿಲ್ಲಿಸಿದ ಸವಾರರು, ಮಳೆ ನಿಲ್ಲುವವರೆಗೂ ಬಸ್ ನಿಲ್ದಾಣಗಳ ಕೆಳಗೆ ಆಶ್ರಯ ಪಡೆದರು. ಇನ್ನು ಮಾರುಕಟ್ಟೆಗೆ ಬಂದಿದ್ದ ಸಾರ್ವಜನಿಕರು ಮತ್ತು ಕಚೇರಿ ಮುಗಿಸಿ ಮನೆಗೆ ಮರಳುತ್ತಿದ್ದವರು ಅಂಗಡಿ ಮುಂಗಟ್ಟುಗಳ ಮುಂದೆ ಹಾಗೂ ಸ್ಕೈವಾಕ್‌ಗಳ ಕೆಳಗೆ ನಿಂತು ಮಳೆಯಿಂದ ಆಶ್ರಯ ಪಡೆದರು.

ಭಾರೀ ಮಳೆಗೆ ಅಂಡರ್​ ಪಾಸ್​ ಬಂದ್​

ಇನ್ನು ಕೆ.ಆರ್. ಸರ್ಕಲ್ ಬಳಿಯ ಅಂಡರ್‌ಪಾಸ್ ಸಂಪೂರ್ಣ ಬಂದ್ ಆಗಿದ್ದು, ವಾಹನ ಸವಾರರು ಟ್ರಾಫಿಕ್ ಜಾಮ್‌ ಸಿಲುಕಿದ್ದಾರೆ. ಕೇವಲ ಅರ್ಧ ಗಂಟೆ ಸುರಿದ ಮಳೆಗೇ ನಗರದ ಹೃದಯಭಾಗ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವಿಧಾನಸೌಧ, ವಿಕಾಸಸೌಧ, ಎಂ.ಎಸ್. ಬಿಲ್ಡಿಂಗ್ ರಸ್ತೆ, ನೃಪತುಂಗ ರಸ್ತೆ, ಮೈಸೂರು ಬ್ಯಾಂಕ್ ಸರ್ಕಲ್ ಮತ್ತು ಕಬ್ಬನ್ ಪಾರ್ಕ್ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಕಿ.ಮೀಟರ್‌ಗಟ್ಟಲೆ ವಾಹನ ದಟ್ಟಣೆ ಉಂಟಾಗಿದೆ.

ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ.

Source link

Leave a Reply

Your email address will not be published. Required fields are marked *