ಚಿಕ್ಕಮಗಳೂರು, ಮಾರ್ಚ್ 03: ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳಕ್ಕೆ ಬ್ರೇಕ್ ಬೀಳುವ ಯಾವುದೇ ಲಕ್ಷಣ ಸದ್ಯಕ್ಕೆ ಕಾಣುತ್ತಿಲ್ಲ. ಮೂಡಿಗೆರೆ ತಾಲೂಕಿನ ಗೋಣಿಬೀಡು ಸುತ್ತಮುತ್ತ ಮರಿಗಳೊಂದಿಗೆ ಕಾಡಾನೆಗಳ ಹಿಂಡು ಓಡಾಟ ನಡೆಸುತ್ತಿವೆ. ಮೂಡಿಗೆರೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಓಡಾಟ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಒಂದು ಕಡೆ ಭೀಮ, ಮತ್ತೊಂದು ಕಡೆ ಎರಡು ಮರಿಯಾನೆಗಳೊಂದಿಗೆ ಕಾಡಾನೆಗಳ ಹಿಂಡು ಸಂಚಾರ ಮಾಡುತ್ತಿವೆ. ಬೇಲೂರು -ಮೂಡಿಗೆರೆ ಗಡಿ ಭಾಗದಲ್ಲಿ ಕಾಡಾನೆಗಳ ಸಂಚಾರ ಹೆಚ್ಚಳ ಹಿನ್ನೆಲೆ, ಸ್ಥಳದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.