ಶಿವಮೊಗ್ಗ, ಜುಲೈ 07: ಮಲೆನಾಡು ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಅಬ್ಬರ ಹೆಚ್ಚಾದ ಪರಿಣಾಮ ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ಗಡಿಯಲ್ಲಿರುವ ವಿಶ್ವ ವಿಖ್ಯಾತ ಜೋಗ ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿದೆ. ಧುಮ್ಮುಕ್ಕುತ್ತಿರುವ ಫಾಲ್ಸ್ ನೋಡಲು ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಿದ್ದು, ಜಲವೈಭವಕ್ಕೆ ಮನಸೂರೆಗೊಂಡು ಫಾಲ್ಸ್ ಎದುರು ನಿಂತು ಫೋಟೋ ಕ್ಲಿಕ್ಕಿಸಿಕೊಂಡು ಸಾರ್ವಜನಿಕರು ಖುಷಿ ಪಡುತ್ತಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.