ಚಾಮರಾಜನಗರ, ಮೇ 01: ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅಪಘಾತದಲ್ಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ತಾಳ ಬೆಟ್ಟದ ಪೊನ್ನಾಚಿ ತಿರುವಿನ ಬಳಿ ನಿಯಂತ್ರಣ ಕಳೆದುಕೊಂಡು ಬಸ್ ಪಲ್ಟಿಯಾಗಿದ್ದು, ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಭೇಟಿ ನೀಡಿದ್ದಾರೆ. ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತದ ಹಿನ್ನೆಲೆ ಕಿಲೋ ಮೀಟರ್ ಗಟ್ಟಲೆ ಸಂಚಾರ ದಟ್ಟಣೆ ಉಂಟಾಗಿತ್ತು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
