ಮಲ್ಲಿಕಾರ್ಜುನ ಮುತ್ಯಾಗೆ ತಾತ್ಕಾಲಿಕ ರಿಲೀಫ್‌: ಬೀಸೋ ದೊಣ್ಣೆಯಿಂದ ಬಚಾವ್

ಮಲ್ಲಿಕಾರ್ಜುನ ಮುತ್ಯಾಗೆ ತಾತ್ಕಾಲಿಕ ರಿಲೀಫ್‌: ಬೀಸೋ ದೊಣ್ಣೆಯಿಂದ ಬಚಾವ್

ಯಾದಗಿರಿ, ಮಾರ್ಚ್ 18): ಜಿಲ್ಲೆಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ (Mallikarjun Mutya)  ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ನಡೆಯುತ್ತಿದ್ದ ತನಿಖೆಗೆ ತಡೆ ನೀಡಿ ಹೈಕೋರ್ಟ್‌ನ ಕಲಬುರಗಿ ವಿಭಾಗೀಯ ಪೀಠ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ವಿಚಾರಣೆಗೆ ತಡೆ ನೀಡುವಂತೆ ಮುತ್ಯಾ‌ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿರುವ ಕಲಬುರಗಿ ಹೈಕೋರ್ಟ್ ಪೀಠ (Kalaburagi High Court Bench) ಇಂದು (ಮಾರ್ಚ್ 18) ಮಧ್ಯಂತರ ತಡೆ ನೀಡಿದೆ. ಇದರಿಂದ ಸ್ವಯಂ ಘೋಷಿತ ದೇವಮಾನವನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

ಬಾಲಕಿ ಜತೆ ಅನುಚಿತವಾಗಿ ವರ್ತನೆ ಆರೋಪದಲ್ಲಿ ಕಳೆದ ಫೆಬ್ರವರಿ 25 ರಂದು ಶಹಾಪುರ ಸಿಡಿಪಿಒ ನೀಡಿದ ದೂರಿನ ಮೇರೆಗೆ ಗೋಗಿ ಪೊಲೀಸ್ ಠಾಣೆಯಲ್ಲಿ ಮುತ್ಯಾ ವಿರುದ್ಧ ಕೇಸ್ ದಾಖಲಾಗಿದ್ದು, ಶಹಾಪುರ ಸಿಪಿಐ ಶರಣಗೌಡ ನ್ಯಾಮಣ್ಣನವರ ಪ್ರಕರಣದ ತನಿಖೆ ನಡೆಸುತ್ತಿದ್ದರು. ಈಗಾಗಲೇ ಮೊದಲ ಹಂತದ ವಿಚಾರಣೆ ನಡೆಸಿದ್ದು, ಮುತ್ಯಾಗೆ ಸೇರಿದ ನಾಲ್ಕು ಮೊಬೈಲ್ ಫೋನ್​ಗಳನ್ನು ಸಹ ತನಿಖಾಧಿಕಾರಿ ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರೆಸಿದ್ದರು. ಆದ್ರೆ, ಇದೀಗ ಕೋರ್ಟ್​, ತನಿಖೆಗೆ ಮಧ್ಯಂತರ ತಡೆ ನೀಡಿದ್ದು, ಮುತ್ಯಾಗೆ ಕೊಂಚ ನಿರಾಳರಾಗಿದ್ದಾರೆ.

ಇದನ್ನೂ ಓದಿ: ಪೋಕ್ಸೋ ಪ್ರಕರಣ: ಮಲ್ಲಿಕಾರ್ಜು ಮುತ್ಯಾಗೆ ಬಿಗ್ ಶಾಕ್ ಕೊಟ್ಟ ಕೋರ್ಟ್

ಜಾಮೀನು ನಿರಾಕರಿಸಿದ್ದ ಕೋರ್ಟ್

ಅಪ್ರಾಪ್ತ ಬಾಲಕಿಯೊಂದಿಗೆಅನುಚಿತ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಮುತ್ಯಾ (Mallikarjun Mutya) ನಿರೀಕ್ಷಣಾ ಜಾಮೀನು ಅರ್ಜಿ (Bail Plea) ವಜಾಗೊಂಡಿದೆ. ತಮ್ಮ ವಿರುದ್ಧದ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ನಡೆಸಿದ್ದ ಯಾದಗಿರಿ (Yadagir ) ಜಿಲ್ಲಾ ಪ್ರಧಾನ, ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮರಳುಸಿದ್ದರಾಧ್ಯ ಅವರು ಮಾರ್ಚ್ 09 ವಜಾ ಮಾಡಿ ಆದೇಶ ಹೊರಡಿಸಿದ್ದರು. ಇದರಿಂದ ಮುತ್ಯಾಗೆ ಬಂಧನ ಭೀತಿ ಎದುರಾಗಿತ್ತು.

ಏನಿದು ಪ್ರಕರಣ?

ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವ ವಿಡಿಯೋ ರಾಜ್ಯಾದ್ಯಂತ ಭಾರೀ ವೈರಲ್ ಆಗಿತ್ತು. ಇದರ ಬೆನ್ನಲ್ಲಿಯೇ ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಯಾದಗಿರಿ ಜಿಲ್ಲಾಧಿಕಾರಿ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು. ಇದರ ಬೆನ್ನಲ್ಲೇ ಡಿಸಿ ಸೂಚನೆ ಮೇರೆಗೆ  ಫೆಬ್ರವರಿ 25ರಂದು ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಮುತ್ಯಾ ನಾಪತ್ತೆಯಾಗಿದ್ದ. ಇನ್ನೊಂದೆಡೆ ಅವರ ಭಕ್ತರು ಹಾಗೂ ಕೋಲಿ ಸಮಾಜ ಪ್ರತಿಭಟನೆ ನಡೆಸಿದ್ದು, ಮುತ್ಯಾ ವಿರುದ್ಧದ ಫೋಕ್ಸೋ ಪ್ರಕರಣ ರದ್ದುಗೊಳಿಸಬೇಕೆಂದು ಆಗ್ರಹಿಸಿದ್ದರು.

ಕರ್ನಾಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *