ಆನೇಕಲ್, ಆಗಸ್ಟ್ 04: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ಬಿಲ್ವಾರದಹಳ್ಳಿ ಗ್ರಾಮದಲ್ಲಿ ಸಂಜೆ ಸುರಿದ ಭಾರಿ ಮಳೆಗೆ ಖಾಸಗಿ ಶಾಲೆಯ ಗೋಡೆ ಏಕಾಏಕಿ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಸಾವುನೋವು ಸಂಭವಿಸಿಲ್ಲ. ವಿಚಾರ ತಿಳಿಯುತ್ತಿದ್ದಂತೆಯೇ ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ರಮೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂಜಾಗ್ರತಾ ಕ್ರಮವಾಗಿ ಕುಸಿದ ಗೋಡೆಯ ಪಕ್ಕದ ಕಟ್ಟಡದಲ್ಲಿದ್ದ ಎರಡು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಜೊತೆಗೆ ಆ ರಸ್ತೆಯಲ್ಲಿ ಸಾರ್ವಜನಿಕರ ಓಡಾಟವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಇನ್ನು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ನಾಳೆ ಶಾಲೆಗೆ ರಜೆ ಘೋಷಿಸಲಾಗಿದ್ದು, ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರ್ ಸ್ಥಳ ಪರೀಶಿಲನೆ ಮಾಡಿದ್ದು, ಕಟ್ಟಡ ಸುರಕ್ಷಿತವಾಗಿದೆ ಎಂದು ವರದಿ ನೀಡಿದ ಬಳಿಕವಷ್ಟೇ ಶಾಲೆ ಪುನಾರಂಭಿಸಲು ಸೂಚಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನ ನೋಡಲು ಇಲ್ಲಿ ಕ್ಲಿಕ್ ಮಾಡಿ.