ಮಹಾರಾಷ್ಟ್ರ: ಆಟವಾಡುತ್ತಿದ್ದಾಗ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು 5 ವರ್ಷದ ಬಾಲಕ ಸಾವು – Kannada News | Maharashtra: 5 Year Old Dies in Open Septic Tank; Urgent Call for Child Safety

ಭೀವಂಡಿ, ಜೂನ್ 16: ಆಟವಾಡುವಾಗ ಐದು ವರ್ಷದ ಬಾಲಕ(Boy) ತೆರೆದಿದ್ದ ಸೆಪ್ಟಿಕ್ ಟ್ಯಾಂಕ್​ಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಭೀವಂಡಿ ನಗರದ ಫರೀದ್ ಬಾಗ್ ಪ್ರದೇಶದಲ್ಲಿ ನಡೆದಿದೆ. ಮೊಹಮ್ಮದ್ ಅಹ್ಮದ್ ಮೃತ ಬಾಲಕ. ಸಿಸಿಟಿವಿಯಲ್ಲಿ ಈ ದೃಶ್ಯ ರೆಕಾರ್ಡ್​ ಆಗಿದೆ. ವೈರಲ್ ಆಗಿರುವ ಸಿಸಿಟಿವಿ ದೃಶ್ಯದಲ್ಲಿ ಕಟ್ಟಡದ ಆವರಣದಲ್ಲಿ ಕೆಲವು ಮಕ್ಕಳು ಆಟವಾಡುತ್ತಿರುವುದು ಕಂಡುಬಂದಿದೆ. ಈ ವೇಳೆ ಸೆಪ್ಟಿಕ್ ಟ್ಯಾಂಕ್ ಬಳಿ ಬಂದ ಬಾಲಕ ಮೊಹಮ್ಮದ್, ಟ್ಯಾಂಕ್‌ನ ಮುಚ್ಚಳವನ್ನು ಸರಿಯಾಗಿ ಮುಚ್ಚದ ಕಾರಣ ಆಕಸ್ಮಿಕವಾಗಿ ಸಮತೋಲನ ಕಳೆದುಕೊಂಡು ನೇರವಾಗಿ ಟ್ಯಾಂಕ್ ಒಳಗಡೆ ಬಿದ್ದಿದ್ದಾನೆ.

ಬಾಲಕ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಮತ್ತು ಕುಟುಂಬಸ್ಥರು ತಕ್ಷಣವೇ ಮಗುವನ್ನು ಟ್ಯಾಂಕ್‌ನಿಂದ ಹೊರತೆಗೆದು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಬಾಲಕ ಈಗಾಗಲೇ ಮೃತಪಟ್ಟಿದೆ ಎಂದು ಘೋಷಿಸಿದ್ದಾರೆ.

ಸೆಪ್ಟಿಕ್ ಟ್ಯಾಂಕ್‌ನ ಮುಚ್ಚಳವನ್ನು ಸುರಕ್ಷಿತವಾಗಿ ಮುಚ್ಚದೇ ಇರುವುದೇ ಮುಗ್ಧ ಬಾಲಕನ ಸಾವಿಗೆ ನೇರ ಕಾರಣ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಭೀವಂಡಿ ಪ್ರದೇಶದಲ್ಲಿ ಇಂತಹ ನಿರ್ಲಕ್ಷ್ಯದ ಘಟನೆಗಳು ಇದೇ ಮೊದಲಲ್ಲ, ಈ ಹಿಂದೆಯೂ ಸಹ ತೆರೆದ ಹೊಂಡ ಹಾಗೂ ಟ್ಯಾಂಕ್‌ಗಳಿಗೆ ಬಿದ್ದು ಹಲವು ಜೀವಗಳು ಬಲಿಯಾಗಿವೆ. ಈ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಎಲ್ಲಾ ವಸತಿ ಸಂಕೀರ್ಣಗಳಲ್ಲಿ ಕಡ್ಡಾಯ ಸುರಕ್ಷತಾ ನಿಯಮಗಳನ್ನು ಜಾರಿಗೆ ತರಬೇಕು ಎಂದು ಸಾರ್ವಜನಿಕರು ಆಡಳಿತವನ್ನು ಒತ್ತಾಯಿಸಿದ್ದಾರೆ.

ಮತ್ತಷ್ಟು ಓದಿ: ಶಾಲಾ ಕಟ್ಟಡದಿಂದ ಬಿದ್ದು ಬೀದರ್​​ನಲ್ಲಿ 15 ವರ್ಷದ ಬಾಲಕ ಸಾವು: ಕಾರಣ ನಿಗೂಢ

ಕಳೆದ ವರ್ಷ ಜಾರ್ಖಂಡ್‌ನ ಜಂಶೇದ್​ಪುರದ ಆಸ್ತಾ ಸಿಟಿ ಎಂಬಲ್ಲಿಯೂ ಇಂತಹುದೇ ಹೃದಯವಿದ್ರಾವಕ ಘಟನೆ ನಡೆದಿತ್ತು. ಅಲ್ಲಿ ತಂದೆಯ ಜೊತೆ ಕೆಲಸದ ಜಾಗಕ್ಕೆ ಹೋಗಿದ್ದ 5 ವರ್ಷದ ಆದರ್ಶ್ ಕುಮಾರ್ ಎಂಬ ಬಾಲಕ ತೆರೆದಿದ್ದ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದ.

ವಿಡಿಯೋ

ಇಂತಹ ಸರಣಿ ದುರಂತಗಳು ವಸತಿ ಸಂಕೀರ್ಣಗಳಲ್ಲಿ ಮುಚ್ಚದ ನೀರಿನ ಹೊಂಡಗಳು ಮತ್ತು ಸೆಪ್ಟಿಕ್ ಟ್ಯಾಂಕ್‌ಗಳು ಮಕ್ಕಳ ಪಾಲಿಗೆ ಎಷ್ಟು ಅಪಾಯಕಾರಿ ಎಂಬುದನ್ನು ನೆನಪಿಸುತ್ತವೆ. ಆಡಳಿತ ಮಂಡಳಿಗಳು ಹಾಗೂ ಪೋಷಕರು ಇಂತಹ ಜಾಗಗಳ ಬಗ್ಗೆ ಹೆಚ್ಚಿನ ನಿಗಾ ವಹಿಸುವುದು ಉತ್ತಮ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *