ಮಹಿಳಾ ಮೀಸಲಾತಿ ಮಸೂದೆಗೆ ರಾಜಕೀಯದ ಬಣ್ಣ ಬಳಿಯಬೇಡಿ; ಸಂಸತ್​​ನಲ್ಲಿ ಪ್ರಧಾನಿ ಮೋದಿ ಭಾಷಣ – Kannada News | Parliament Special Session No Need To Give it Political Colour PM Modi says On Women’s Quota Bill

ನವದೆಹಲಿ, ಏಪ್ರಿಲ್ 16: ಮಹಿಳಾ ಮೀಸಲಾತಿ ಮಸೂದೆಯ (Women’s Reservation Bill) ಬಗ್ಗೆ ಇಂದಿನ ವಿಶೇಷ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಈ ಮಸೂದೆಯನ್ನು ಮಹಿಳಾ ಸಬಲೀಕರಣದ “ಐತಿಹಾಸಿಕ ಹೆಜ್ಜೆ” ಎಂದು ಬಣ್ಣಿಸಿದ್ದಾರೆ.’ಮಹಿಳಾ ಮೀಸಲಾತಿಗೆ ರಾಜಕೀಯದ ಬಣ್ಣ ಬಳಿಯುವ ಅಗತ್ಯವಿಲ್ಲ’ ಎಂದು ಹೇಳಿರುವ ಪ್ರಧಾನಿ ಮೋದಿ ಈ ಕಾಯ್ದೆಯನ್ನು 25-30 ವರ್ಷಗಳ ಹಿಂದೆಯೇ ಜಾರಿಗೊಳಿಸಬೇಕಿತ್ತು ಎಂದಿದ್ದಾರೆ.

ಸೀಮಾ ನಿರ್ಣಯ ಮಸೂದೆ ಮತ್ತು ಮಹಿಳಾ ಕೋಟಾ ಮಸೂದೆಯ ಕುರಿತು ಲೋಕಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ನಾನು ಒಂದು ಪಕ್ಷವನ್ನು ಹೊರತುಪಡಿಸಿ ಎಲ್ಲಾ ಪಕ್ಷಗಳನ್ನು ನಾನು ಭೇಟಿಯಾದೆ. ಯಾರೂ ಮಹಿಳಾ ಮೀಸಲಾತಿ ಮಸೂದೆಯನ್ನು ತಾತ್ವಿಕವಾಗಿ ವಿರೋಧಿಸಲಿಲ್ಲ. ಆದರೆ ಅದಾದ ನಂತರ ಒಂದು ರಾಜಕೀಯ ದೃಷ್ಟಿಕೋನವನ್ನು ಇಟ್ಟುಕೊಂಡು ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಆದರೆ ನಾನು ಅಂತಹ ಜನರಿಗೆ ಸ್ನೇಹಿತನಂತೆ ಒಂದು ಸಲಹೆ ನೀಡಲು ಬಯಸುತ್ತೇನೆ. ನಾವೆಲ್ಲರೂ ಒಟ್ಟಿಗೆ ಇದನ್ನು ಜಾರಿಗೊಳಿಸಿದರೆ ದೇಶಕ್ಕೆ ಮಾಡಿದ ಸೇವೆಗಾಗಿ ಇತಿಹಾಸವು ನಮ್ಮನ್ನು ನೆನಪಿಸಿಕೊಳ್ಳುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Women Reservation Bill: ಗದ್ದಲದ ನಡುವೆ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಮಸೂದೆಯ ಕುರಿತು ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ನಾವು ಭಾರತೀಯರು ರಾಷ್ಟ್ರಕ್ಕೆ ಹೊಸ ದಿಕ್ಕು ನೀಡಲು ಒಗ್ಗೂಡುತ್ತಿದ್ದೇವೆ. ನಮ್ಮ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ನಾವು ಅರ್ಥಪೂರ್ಣ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ನಾವು ಅರ್ಥಪೂರ್ಣ ಪ್ರಯತ್ನ ಮಾಡುತ್ತಿದ್ದೇವೆ. ಭಾರತ ಪ್ರಜಾಪ್ರಭುತ್ವದ ತಾಯಿ. ಈ ಅಭಿವೃದ್ಧಿಯ ಪ್ರಯಾಣದಲ್ಲಿ ಹೊಸ ಆಯಾಮವನ್ನು ಸೇರಿಸಲು ನಮಗೆ ಪವಿತ್ರವಾದ ಅವಕಾಶ ನೀಡಲಾಗಿದೆ. ರಾಷ್ಟ್ರ ನಿರ್ಮಾಣದ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ದೇಶದ ಅರ್ಧದಷ್ಟು ಜನಸಂಖ್ಯೆಯಾದ ಮಹಿಳೆಯರನ್ನು ಸೇರಿಸಿಕೊಳ್ಳುವ ಅವಕಾಶ ನಮಗೆ ಸಿಕ್ಕಿರುವುದು ನಮ್ಮ ಅದೃಷ್ಟ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಸೇರಿ ಮೂರು ಮಸೂದೆಗಳ ಕುರಿತು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ

“ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾದರೆ, ಇದು ಎಲ್ಲರಿಗೂ, ಇಡೀ ರಾಷ್ಟ್ರಕ್ಕೆ ಸಾಮೂಹಿಕ ಯಶಸ್ಸು. ಇದು ಯಾವುದೇ ಒಂದು ಪಕ್ಷಕ್ಕೆ ಸಿಕ್ಕ ವಿಜಯವಾಗಿರುವುದಿಲ್ಲ. ಹೀಗಾಗಿ ಈ ಮಸೂದೆಗೆ ರಾಜಕೀಯ ಬಣ್ಣ ನೀಡುವ ಅಗತ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:38 pm, Thu, 16 April 26

Source link

Leave a Reply

Your email address will not be published. Required fields are marked *