
ಮಂಗಳೂರು, ಮಾರ್ಚ್ 17: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಬಲವಂತ ಮಾಡಿರುವ ಆರೋಪ ಎದುರಿಸುತ್ತಿರುವ ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಇದೀಗ ಅನೇಕ ಆರೋಪಗಳು ಕೇಳಿಬರುತ್ತಿವೆ. ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತನಿಖೆಗೆ ಆದೇಶಿಸಿದ್ದು, ಯಾರಾದರೂ ಸಂತ್ರಸ್ತೆಯರಿದ್ದರೆ ಧೈರ್ಯವಾಗಿ ಬಂದು ದೂರು ನೀಡಿ, ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಅಭಯ ನೀಡಿದ್ದಾರೆ. ಆರೋಪಿ ಸಂದೇಶ್ ಹಲವಾರು ಮಹಿಳೆಯರ ಜತೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದ್ದು, ತಡರಾತ್ರಿ ಮಹಿಳೆಯೊಬ್ಬರ ಮನೆ ಕಂಪೌಂಡ್ ಹಾರಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲೂ ಹರಿದಾಡುತ್ತಿದೆ.
ಹೆಚ್ಚಿನ ವಿವರಗಳಿಗೆ ಓದಿ: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ: ಸಂತ್ರಸ್ತ ಮಹಿಳೆಯ ಅಪ್ರಾಪ್ತ ಮಗಳ ಮೇಲೂ ಕಣ್ಣು! ಆಡಿಯೋ ವೈರಲ್