ಬೆಂಗಳೂರು, ಜುಲೈ 16: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರಾಗಿದ್ದು, ಬುಧವಾರ ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಜತೆಗೆ, ಉಸಿರಾಟದ ಸಮಸ್ಯೆಯೂ ಕಾಣಿಸಿಕೊಂಡಿದೆ. ಹೆಚ್ಡಿ ದೇವೇಗೌಡರು ಪತ್ನಿಯ ಆರೋಗ್ಯ ವಿಚಾರಿಸಿ ಮನೆಗೆ ಮರಳಿದ್ದಾರೆ. ಮಗ ಹಾಗೂ ಮಾಜಿ ಸಚಿವರಾಗಿರುವ ಹೆಚ್ಡಿ ರೇವಣ್ಣ ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯ ವಿಚಾರಿಸಿದ್ದಾರೆ. ಚೆನ್ನಮ್ಮ ಅವರಿಗೆ ಮೂರು ದಿನ ಆಸ್ಪತ್ತೆಯಲ್ಲಿ ಚಿಕಿತ್ಸೆ ನೀಡುವ ಸಾಧ್ಯತೆ ಇದೆ ಎಂಬುದು ತಿಳಿದುಬಂದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ