ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ಅಚ್ಚರಿಯ ಹೇಳಿಕೆ ಕೊಟ್ಟ ಹೆಚ್​​. ಡಿ. ರೇವಣ್ಣ – Kannada News | Revanna Bats for Sumalatha Ambareesh, Makes Surprise Political Remark

ಬೆಂಗಳೂರು, ಜೂನ್​​ 18: ಹೆಚ್​.ಡಿ. ದೇವೇಗೌಡರಿಗೆ ರಾಜ್ಯಸಭಾ ಸ್ಥಾನ ಕೈತಪ್ಪಿದ ಬಗ್ಗೆ ಪ್ರತಿಕ್ರಿಯಿಸಿರುವ ಹೆಚ್​​.ಡಿ. ರೇವಣ್ಣ, ದೇವೇಗೌಡರು ಅಧಿಕಾರಕ್ಕಾಗಿ ಎಂದಿಗೂ ಯಾರ ಬಾಗಿಲಿಗೂ ಹೋಗಿಲ್ಲ. ಪ್ರಧಾನಮಂತ್ರಿ ಹುದ್ದೆಯನ್ನೇ ಅವರು ತ್ಯಾಗ ಮಾಡಿದ್ದರು ಎಂಬುದನ್ನು ಅವರು ನೆನಪಿಸಿದ್ದಾರೆ. ರಾಜ್ಯಸಭಾ ಸ್ಥಾನಕ್ಕಾಗಿ ದೇವೇಗೌಡರು ಅಥವಾ ಕುಮಾರಸ್ವಾಮಿಯವರು ಯಾರನ್ನೂ ಕೇಳಿರಲಿಲ್ಲ. ರಾಜ್ಯಸಭಾ ಸ್ಥಾನಕ್ಕೆ ಮೊದಲು ದೇವೇಗೌಡರು ಮತ್ತು ಸದಾನಂದಗೌಡರ ಹೆಸರುಗಳು ಕೇಳಿಬಂದಿದ್ದವು. ನಂತರ ಮಂಡ್ಯದ ಮೇಡಂ ಎಂದು ಸುಮಲತಾ ಅಂಬರೀಶ್ ಅವರ ಹೆಸರನ್ನು ಪ್ರಸ್ತಾಪಿಸಿದ ರೇವಣ್ಣ, ಅವರಿಗೂ ಟೋಪಿ ಹಾಕಲಾಯಿತು ಎಂದು ಆರೋಪಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *