Headlines

ಮಾಲತಿ ನದಿ ಪ್ರವಾಹದಲ್ಲಿ ಸಿಲುಕಿದ ಕಾರು: ಮಕ್ಕಳು ಸೇರಿ ಒಂದೇ ಕುಟುಂಬದ 6 ಜನರ ರಕ್ಷಣೆ! – Kannada News | Car Trapped in Malathi River Flood: Six Family Members, Including Children, Rescued

ಚಿಕ್ಕಮಗಳೂರು, ಆಗಸ್ಟ್​ 01: ಜಿಲ್ಲೆಯ ಹೆಬ್ಬೂರು ಸಮೀಪದ ಹೊಳೆಯಲ್ಲಿ ಭಾರೀ ಮಳೆಯಿಂದಾಗಿ ನೀರು ಉಕ್ಕಿ ಹರಿದು ಕಾರೊಂದು ಮುಳುಗಡೆಯಾಗಿದೆ. ಕಾರಿನಲ್ಲಿ ಸಿಲುಕಿದ್ದ ಹೊನ್ನಾವರ ಮೂಲದ ಕುಟುಂಬವನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ನಡೆದಿದೆ. ನಾಬ್ಳ-ಬೆಳ್ಳೂರು-ಶೃಂಗೇರಿ ಸಂಪರ್ಕಿಸುವ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ತುಂಬಿ ಹರಿಯುತ್ತಿದ್ದ ಸೇತುವೆಯನ್ನು ದಾಟಲು ಪ್ರಯತ್ನಿಸಿದಾಗ ಕಾರು ನೀರಿನಲ್ಲಿ ಸಿಲುಕಿಕೊಂಡಿದೆ. ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯೇ ಈ ಪರಿಸ್ಥಿತಿಗೆ ಕಾರಣವಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಉತ್ತರ ಕನ್ನಡ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ನೀರಿನ ಮಟ್ಟ ಹೆಚ್ಚಾಗಿ ರಸ್ತೆಗಳು ಜಲಾವೃತಗೊಂಡಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *