ಮಿಲಿಟರಿ ಸಂಘರ್ಷ ಯಾವುದೇ ಸಮಸ್ಯೆಗೆ ಪರಿಹಾರ ಅಸಾಧ್ಯ; ಅಮೆರಿಕ-ಇರಾನ್ ಯುದ್ಧದ ಬಗ್ಗೆ ಪ್ರಧಾನಿ ಮೋದಿ ಹೇಳಿಕೆ – Kannada News | Military Conflict Cannot Resolve Any Issue; PM Modi’s remark On Iran Israel US War

ನವದೆಹಲಿ, ಮಾರ್ಚ್ 5: ಇರಾನ್-ಇಸ್ರೇಲ್-ಯುಎಸ್ ಮತ್ತು ಉಕ್ರೇನ್-ರಷ್ಯಾ ಯುದ್ಧಗಳ ಮಧ್ಯೆ ಜಾಗತಿಕ ಶಾಂತಿಗೆ ಭಾರತದ ಬದ್ಧತೆಯನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಒತ್ತಿ ಹೇಳಿದ್ದಾರೆ. ಮಿಲಿಟರಿ ಸಂಘರ್ಷಗಳು ಯಾವುದೇ ಸಮಸ್ಯೆಗೆ ಪರಿಹಾರವಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದು, ಮಿಲಿಟರಿ ಕಾರ್ಯಾಚರಣೆಗಳ ಬದಲು ರಾಜತಾಂತ್ರಿಕತೆಯ ಮೂಲಕ ಸಂಘರ್ಷಗಳನ್ನು ಪರಿಹರಿಸಬೇಕು ಎಂದಿದ್ದಾರೆ.

ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ಮೋದಿ ಈ ಹೇಳಿಕೆಗಳನ್ನು ನೀಡಿದ್ದಾರೆ. “ಭಾರತ ಮತ್ತು ಫಿನ್ಲೆಂಡ್ ಎರಡೂ ಕಾನೂನು ನಿಯಮ, ಸಂವಾದ ಮತ್ತು ರಾಜತಾಂತ್ರಿಕತೆಯನ್ನು ನಂಬುತ್ತವೆ. ಮಿಲಿಟರಿ ಸಂಘರ್ಷವು ಯಾವ ಸಮಸ್ಯೆಯನ್ನು ಕೂಡ ಪರಿಹರಿಸಲು ಸಾಧ್ಯವಿಲ್ಲ ಎಂದು ನಾವು ಸರ್ವಾನುಮತದಿಂದ ಹೇಳಿದ್ದೇವೆ. ಉಕ್ರೇನ್ ಆಗಿರಲಿ ಅಥವಾ ಪಶ್ಚಿಮ ಏಷ್ಯಾವಾಗಲಿ, ಸಂಘರ್ಷ ಮತ್ತು ಶಾಂತಿಯ ಮೂಲಕ ಸಂಘರ್ಷವನ್ನು ಅಂತ್ಯಗೊಳಿಸುವ ಪ್ರಯತ್ನಕ್ಕೆ ನಮ್ಮ ಬೆಂಬಲ ಇರುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಇರಾನ್ ಯುದ್ಧನೌಕೆ ಮೇಲೆ ಸಬ್​ಮರೀನ್ ದಾಳಿ ಹೇಗಿತ್ತು? ರೋಚಕ ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ

ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ವೈಮಾನಿಕ ದಾಳಿಗಳನ್ನು ಪ್ರಾರಂಭಿಸಿದ ನಂತರ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಇರಾನ್​ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ. ಇದಕ್ಕೆ ಪ್ರತೀಕಾರವಾಗಿ, ಇರಾನ್ ಕೂಡ ಇಸ್ರೇಲ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಕುವೈತ್, ದುಬೈ, ಕತಾರ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ದೇಶಗಳಲ್ಲಿನ ಯುಎಸ್ ಮಿಲಿಟರಿ ನೆಲೆಗಳ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿತು. ಮಂಗಳವಾರ ರಾತ್ರಿ ಹಿಂದೂ ಮಹಾಸಾಗರದಲ್ಲಿ ಯುಎಸ್ ನೌಕಾಪಡೆ ಇರಾನಿನ ಯುದ್ಧನೌಕೆಯನ್ನು ಮುಳುಗಿಸಿ 87 ಇರಾನಿನ ನಾವಿಕರು ಸಾವನ್ನಪ್ಪಿದ ನಂತರ ಇಂದು ಇರಾನ್ ಇಸ್ರೇಲ್ ಮತ್ತು ಅಮೇರಿಕನ್ ನೆಲೆಗಳ ಮೇಲೆ ಹೊಸ ದಾಳಿಯನ್ನು ಪ್ರಾರಂಭಿಸಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *