ಮಿಲ್ಲರ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಡೆಲ್ಲಿ ಕ್ಯಾಪಿಟಲ್ಸ್

ಮಿಲ್ಲರ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಡೆಲ್ಲಿ ಕ್ಯಾಪಿಟಲ್ಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 14ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡವು ಕೇವಲ 1 ರನ್​​ನಿಂದ ಸೋತಿದೆ. ಗೆಲುವಿನ ಹೊಸ್ತಿಲಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್​ ತಂಡವು ಡೇವಿಡ್ ಮಿಲ್ಲರ್ ಅವರ ಒಂದು ನಿರ್ಧಾರದಿಂದಾಗಿ ಸೋಲೊಪ್ಪಿಕೊಳ್ಳಬೇಕಾಯಿತು ಎಂದರೆ ತಪ್ಪಾಗಲಾರದು.

ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್​ಗಳಲ್ಲಿ 210 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕೊನೆಯ ಓವರ್‌ನಲ್ಲಿ 13 ರನ್‌ಗಳ ಅಗತ್ಯವಿತ್ತು. ಕ್ರೀಸ್‌ನಲ್ಲಿದ್ದ ಸ್ಫೋಟಕ ಬ್ಯಾಟರ್ ಡೇವಿಡ್ ಮಿಲ್ಲರ್ ಅಬ್ಬರದ ಬ್ಯಾಟಿಂಗ್ ನಡೆಸಿ ಪಂದ್ಯವನ್ನು ಕೊನೆಯ ಎರಡು ಎಸೆತಗಳಲ್ಲಿ 2 ರನ್‌ಗಳ ಅಗತ್ಯಕ್ಕೆ ತಂದಿಟ್ಟರು.

19.5ನೇ ಎಸೆತದಲ್ಲಿ ಪ್ರಸಿದ್ಧ್ ಕೃಷ್ಣ ಅವರ ಬೌಲಿಂಗ್‌ನಲ್ಲಿ ಮಿಲ್ಲರ್ ಚೆಂಡನ್ನು ಡೀಪ್ ಸ್ಕ್ವೇರ್ ಲೆಗ್‌ಗೆ ಹೊಡೆದರು. ಈ ವೇಳೆ ಸುಲಭವಾಗಿ ಒಂದು ರನ್ ಓಡುವ ಅವಕಾಶವಿತ್ತು. ಆದರೆ, ಅತಿಯಾದ ಆತ್ಮವಿಶ್ವಾಸದಲ್ಲಿದ್ದ ಮಿಲ್ಲರ್, ನಾನ್-ಸ್ಟ್ರೈಕರ್ ಎಂಡ್‌ನಲ್ಲಿದ್ದ ಕುಲ್ದೀಪ್ ಯಾದವ್ ಅವರನ್ನು ವಾಪಸ್ ಕಳುಹಿಸಿ ಸಿಂಗಲ್ ಓಡಲು ನಿರಾಕರಿಸಿದರು.

ಪರಿಣಾಮ ಕೊನೆಯ ಎಸೆತದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡಕ್ಕೆ ಗೆಲ್ಲಲು 2 ರನ್ ಬೇಕಿತ್ತು (ಸಿಂಗಲ್ ತೆಗೆದುಕೊಂಡಿದ್ದರೆ ಪಂದ್ಯ ಟೈ ಆಗುತ್ತಿತ್ತು). ಆದರೆ ಅಂತಿಮ ಎಸೆತದಲ್ಲಿ ಮಿಲ್ಲರ್ ರನ್ ಹೊಡೆಯಲು ವಿಫಲರಾದರು. ಇದಾಗ್ಯೂ  ಬೈ ರನ್ ಓಡಲು ಪ್ರಯತ್ನಿಸಿದ ಕುಲ್ದೀಪ್ ಯಾದವ್ ಅವರನ್ನು ಜೋಸ್ ಬಟ್ಲರ್ ಅದ್ಭುತವಾಗಿ ರನ್ ಔಟ್ ಮಾಡಿದರು. ಈ ಮೂಲಕ ಗುಜರಾತ್ ಟೈಟಾನ್ಸ್ ತಂಡವು 1 ರನ್​ನ ರೋಚಕ ಜಯ ಸಾಧಿಸುವಲ್ಲಿ ಯಶಸ್ವಿಯಾಯಿತು.

ಒಂದು ವೇಳೆ ಡೇವಿಡ್ ಮಿಲ್ಲರ್ 5ನೇ ಎಸೆತದಲ್ಲಿ ಒಂದು ರನ್ ಓಡಿದ್ದರೆ ಪಂದ್ಯವನ್ನು ಟೈ ಮಾಡಿ ಸೋಲನ್ನು ತಪ್ಪಿಸಿಕೊಳ್ಳಬಹುದಿತ್ತು. ಆದರೆ ಆ ಒಂದು ನಿರಾಕರಣೆಗೆ ಡೆಲ್ಲಿ ಕ್ಯಾಪಿಟಲ್ಸ್ ಸೋಲಿನ ಬೆಲೆ ತೆರಬೇಕಾಗಿ ಬಂದಿದೆ.

ಇದೀಗ ಮಿಲ್ಲರ್ ಅವರ ಈ ನಿರ್ಧಾರ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಅವರು ಕುಲ್ದೀಪ್ ಯಾದವ್ ಅವರ ಮೇಲೆ ಭರವಸೆ ಇಡಲಿಲ್ಲವೇ? ಅಥವಾ ತಾನೇ ಪಂದ್ಯ ಮುಗಿಸುತ್ತೇನೆಂಬ ಅತಿಯಾದ ಆತ್ಮವಿಶ್ವಾಸ ಮುಳುವಾಯಿತೇ? ಎಂಬ ಪ್ರಶ್ನೆಗಳು ಎದ್ದಿವೆ. ಒಂದು ವೇಳೆ ಸಿಂಗಲ್ ಪಡೆದಿದ್ದರೆ ಪಂದ್ಯ ಕನಿಷ್ಠ ಪಕ್ಷ ‘ಸೂಪರ್ ಓವರ್’ ಹಂತಕ್ಕೆ ತಲುಪುತ್ತಿತ್ತು.

ಒಟ್ಟಿನಲ್ಲಿ ಗೆಲ್ಲಬಹುದಾಗಿದ್ದ ಪಂದ್ಯದಲ್ಲಿ ಸೋಲುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂಕಪಟ್ಟಿಯಲ್ಲಿ ಮಹತ್ವದ ಸ್ಥಾನ ಕಳೆದುಕೊಂಡರೆ, ಗುಜರಾತ್ ಟೈಟಾನ್ಸ್ ತಂಡವು ಅದೃಷ್ಟದ ಗೆಲುವಿನೊಂದಿಗೆ ಸಂಭ್ರಮಿಸಿದೆ.

 

Source link

Leave a Reply

Your email address will not be published. Required fields are marked *