ಶಿವಮೊಗ್ಗ, (ಆಗಸ್ಟ್ 02): ಕರ್ನಾಟಕದಲ್ಲಿ ಮುಂಗಾರು ಮಳೆ (monsson Rain) ಆರಂಭದಲ್ಲಿ ಕೈಕೊಟ್ಟಿದ್ದರೂ ಸಹ ಜುಲೈ ಅಂತ್ಯದಿಂದ ಚುರುಕುಗೊಂಡಿದೆ. ಅದರಲ್ಲೂ ಕರಾವಳಿ (Karavali) ಮಲೆನಾಡು ಭಾಗದ ಜಿಲ್ಲೆಗಳಲ್ಲಿ ವರುಣ ಅಬ್ಬರದಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಆದರೂ ಮಳೆ ಅಬ್ಬರ ಇಲ್ಲಿ ನಿಂತಿಲ್ಲ. ಮುಂದಿನ ದಿನಗಳಲ್ಲೂ ಸಹ ಮುಂದುವರಿಯಲಿದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ (Shivamogga) ಹಾಗೂ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕೆಲ ತಾಲೂಕುಗಳಲ್ಲಿ ನಾಳೆ (ಆಗಸ್ಟ್ 03) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ ಕೆಲ ತಾಲೂಕುಗಳಲ್ಲಿ ರಜೆ
ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಣೆ.
ನಾಳೆ (ಆಗಸ್ಟ್ 03) ದಾಂಡೇಲಿ, ಜೋಯಿಡಾ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ಪ್ರೌಢಶಾಲೆವರೆಗೆ ರಜೆ ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಮಳೆ ಅಬ್ಬರಕ್ಕೆ ಗುಡ್ಡ ಕುಸಿದು ತೀರ್ಥಹಳ್ಳಿಯಲ್ಲಿ ದುರಂತ: ಮಗು ಸೇರಿ ಒಂದೇ ಕುಟುಂಬದ ಮೂವರು ದುರ್ಮರಣ
ಸಾಗರದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಇನ್ನು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗುತ್ತಿರುವುದರಿಂದ ಸಾಗರ ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜಿಗೆ ನಾಳೆ (ಆಗಸ್ಟ್ 03) ರಜೆ ಘೋಷಿಸಿ ತಹಶೀಲ್ದಾರ್ ಡಾ.ಪ್ರತಿಭಾ ಆದೇಶಿಸಿದ್ದಾರೆ. ಇನ್ನು ಮಳೆಯಿಂದಾಗುವ ಅನಾಹುತ, ಸಮಸ್ಯೆಗಳಿಗೆ ಸ್ಪಂದಿಸಲು ಸಿದ್ಧತೆ ಕೈಗೊಳ್ಳಲಾಗಿದ್ದು, ತಾಲೂಕು ಕಚೇರಿಯಲ್ಲಿ 24 ಗಂಟೆಯೂ ಸಹಾಯವಾಣಿ ಆರಂಭ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆಗೆ ರೆಡ್ ಅಲರ್ಟ್

ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆ ಅನಾಹುತ ಸೃಷ್ಟಿಸಿದೆ. ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ತಡೆ ಗೋಡೆ, ಗುಡ್ಡ ಕುಸಿತದಿಂದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ತುಂಗಾ ನದಿ ತುಂಬಿ ಹರಿಯುತ್ತಿದ್ದು, ನದಿಪಾತ್ರದಲ್ಲಿ ಪ್ರವಾಹದ ಭೀತಿ ಶುರುವಾಗಿದೆ. ಇಷೆಲ್ಲಾ ಅವಾಂತರಗಳು ಸೃಷ್ಟಿಸಿದ ವರುಣನ ಅಬ್ಬರ ಮುಂದುವರೆಯಲಿದೆ. ಹೌದು…ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲೂ ಭಾರೀ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಸಹ ಘೋಷಿಸಲಾಗಿದೆ.