Headlines

ಮುಷ್ಕರಕ್ಕೆ ಸಜ್ಜಾಗಿರುವ ಸರ್ಕಾರಿ ವೈದ್ಯರಿಗೆ ಖಡಕ್​​ ಎಚ್ಚರಿಕೆ ನೀಡಿದ ಆರೋಗ್ಯ ಇಲಾಖೆ – Kannada News | Government Doctors Strike: Health department Warns of Legal Action, Urges Resolution

ಬೆಂಗಳೂರು, ಫೆಬ್ರವರಿ 26: ರಾಜ್ಯ ಸರ್ಕಾರದ ವಿರುದ್ಧ ವೈದ್ಯರು (Doctors) ಸಿಡಿದೆದ್ದಿದ್ದಾರೆ. ಆರೋಗ್ಯ ಇಲಾಖೆಯಲ್ಲಿನ ವೇತನ, ಮುಂಬಡ್ತಿ ಹಾಗೂ ನೇಮಕಾತಿ ಸೇರಿದಂತೆ 14 ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಲಾಗಿದೆ. ಜೊತೆಗೆ ಮಾರ್ಚ್​​ 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ. ಮುಷ್ಕರ ಹಿನ್ನೆಲೆ ಎಚ್ಚೆತ್ತ ಆರೋಗ್ಯ ಇಲಾಖೆ, ಮುಷ್ಕರ ಕೈಬಿಟ್ಟು ಕಾನೂನ ಅಡಿಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ತಿಳಿಸಲಾಗಿದ್ದು, ಒಂದು ವೇಳೆ ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ ತಂದರೆ ಕಾನೂನು ಕ್ರಮಕೈಗೊಳ್ಳುವುದಾಗಿ ಆರೋಗ್ಯ ಇಲಾಖೆ ಮುಖ್ಯ ಕಾರ್ಯದರ್ಶಿ ಹರ್ಷಗುಪ್ತಾ ಸೂಚನೆ ನೀಡಿದ್ದಾರೆ.

ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?

ಈ ಬಗ್ಗೆ ಆರೋಗ್ಯ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯರು ಹಾಗೂ ಇತರೆ ಸಿಬ್ಬಂದಿಗಳು ಸಾರ್ವಜನಿಕ ಆರೋಗ್ಯ ಸೇವೆಯ ನಿರಂತರತೆ ಹಾಗೂ ರೋಗಿಗಳ ಆರೋಗ್ಯ ಕಾಪಾಡುವ ಮಹತ್ವದ ವೃತ್ತಿಪರ ಮತ್ತು ನೈತಿಕ ಜವಾಬ್ದಾರಿಯನ್ನು ಹೊಂದಿರುವುದರಿಂದ, ಸಾಮೂಹಿಕ ಮುಷ್ಕರದಂತಹ ಕ್ರಮಗಳಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುವುದನ್ನು ಮನಗಂಡು ಮುಷ್ಕರದಿಂದ ಹಿಂದೆ ಸರಿದು ತಮ್ಮ ಕರ್ತವ್ಯಗಳನ್ನು ನಿರ್ವಹಿಸಿ ತಮ್ಮ ಬೇಡಿಕೆಗಳು ಮತ್ತು ಸಮಸ್ಯೆಗಳ ಕುರಿತು ಕಾನೂನಿನ ಅಡಿ ಲಭ್ಯವಿರುವ ಮಾರ್ಗಗಳನ್ನು ಬಳಿಸಿ ಬಗೆಹರೆಸುವುದು ಅಗತ್ಯವಾಗಿದ್ದು, ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ ಉಂಟಾಗದಂತೆ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವುದೆಂದು ತಿಳಿಸಲಾಗಿದೆ.

ಇದನ್ನೂ ಓದಿ: ಕಡ್ಡಾಯ ಗ್ರಾಮೀಣ ಸೇವೆಯಿಂದ ತಪ್ಪಿಸಿಕೊಂಡ 400ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಶಾಕ್!

ಒಂದು ವೇಳೆ ಸಿಬ್ಬಂದಿಗಳು ಯಾವುದೇ ರೀತಿಯ ಮುಷ್ಕರ ನಿಮಿತ ಕೆಲಸದಿಂದ ಗೈರುಹಾಜರಾಗಿದ್ದಲ್ಲಿ ಮತ್ತು ಅದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದ್ದಲ್ಲಿ ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್​ ಎಚ್ಚರಿಕೆ ನೀಡಲಾಗಿದೆ.

ಡಿಮ್ಯಾಂಡ್ ಏನು?

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಸರಬರಾಜು ಆಗಬೇಕು. ವೃಂದ, ನೇಮಕಾತಿ ನಿಯಮ 3 ವರ್ಷಕ್ಕೊಮ್ಮೆ ತಿದ್ದುಪಡಿಯಾಗ್ಬೇಕು. ಇಲಾಖೆಯ ಎಲ್ಲಾ ವೃಂದಗಳ ಜೇಷ್ಠತಾ ಪಟ್ಟಿಯನ್ನ ಪ್ರಕಟಿಸಬೇಕು. ಐದು ವರ್ಷಗಳಿಂದ ತಡೆ ಹಿಡಿಯಲಾದ ಮುಂಬಡ್ತಿಯನ್ನ ನೀಡಬೇಕು. ಉನ್ನತ ವ್ಯಾಸಂಗ, ಸ್ನಾತಕೋತ್ತರ ವ್ಯಾಸಂಗಕ್ಕೆ ಅವಕಾಶ ಮಾಡಬೇಕು. 6 ಸಾವಿರ ನೌಕರರಿಗೆ ಪ್ರತಿತಿಂಗಳ ಮೊದಲ ವಾರದಲ್ಲಿ ವೇತನ ಭತ್ಯೆ ನೀಡಬೇಕು. ಖಾಲಿ ಇರುವ ವೈದ್ಯರು, ಅರೆ ವೈದ್ಯರ ಹುದ್ದೆಯನ್ನ ಭರ್ತಿ ಮಾಡಬೇಕೆಂದು ಡಿಮ್ಯಾಂಡ್ ಇಟ್ಟಿದ್ದಾರೆ. ತಮ್ಮ ಬೇಡಿಕೆ ಈಡೇರದಿದ್ರೆ ಮಾರ್ಚ್​ 11 ರಿಂದ 15ರವರೆಗೆ ಒಪಿಡಿ ಬಂದ್​ಗೆ ಪ್ಲ್ಯಾನ್ ಮಾಡಿದ್ದಾರೆ. ಇದಕ್ಕೂ ರೆಸ್ಪಾನ್ಸ್ ಸಿಗದಿದ್ರೆ 2ನೇ ಹಂತದಲ್ಲಿ ಆಸ್ಪತ್ರೆಗೆ ಗೈರಾಗುವ ವಾರ್ನಿಂಗ್ ಕೊಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *