
ದಾವಣಗೆರೆ, ಮಾರ್ಚ್ 19: ಬಾಗಲಕೋಟೆ ಸೇರಿ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಈ ನಡುವೆ ವಿಜಯಪುರದಲ್ಲಿ ಮಾತನಾಡಿದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿಯಲ್ಲಿ ನಡೆಯುತ್ತಿರುವ ಹೊಂದಾಣಿಕೆ ರಾಜಕಾರಣದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಕುಟುಂಬ ತಮ್ಮ ಸ್ವಾರ್ಥಕ್ಕಾಗಿ ಪಕ್ಷವನ್ನು ಬಲಿಕೊಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಯಡಿಯೂರಪ್ಪ ಕುಟುಂಬ ಹಾಗೂ ಶಾಮನೂರು ಕುಟುಂಬದ ನಡುವೆ ವ್ಯವಸ್ಥಿತ ಹೊಂದಾಣಿಕೆ ಇದೆ. ಹಿಂದೆ ಶಿವಮೊಗ್ಗದಲ್ಲಿ ರಾಘವೇಂದ್ರಗೆ ಮತ ಹಾಕುವಂತೆ ಶಾಮನೂರು ಶಿವಶಂಕರಪ್ಪ ಹೇಳಿದ್ದರೆ, ದಾವಣಗೆರೆಯಲ್ಲಿ ಯಡಿಯೂರಪ್ಪ ಶಾಮನೂರಿಗೆ ಮತ ಹಾಕಿ ಎಂದು ಹೇಳಿದ್ದರು . ಒಂದೊಮ್ಮೆ ದಾವಣಗೆರೆಯಲ್ಲಿ ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ, ಹಾಲಿ ಬಿಜೆಪಿ ಅಭ್ಯರ್ಥಿಯಿಂದ ಟಿಕೆಟ್ ಹಿಂಪಡೆದು ಶಾಮನೂರು ಮಲ್ಲಿಕಾರ್ಜುನ್ ಅವರ ಪುತ್ರನಿಗೆ ನೀಡಿದರೂ ಆಶ್ಚರ್ಯವಿಲ್ಲ ಎಂದು ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.