ಮೆದುಳಿನ ಆರೋಗ್ಯ ಕಾಪಾಡಲು ಡಬ್ಲ್ಯೂಎಚ್ಓ ಶಿಫಾರಸು ಮಾಡಿರುವ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ – Kannada News | WHO Tips for Brain Health: Daily Habits That May Protect Your Memory

ವಯಸ್ಸು ಹೆಚ್ಚಾದಂತೆ ದೇಹದ ಜೊತೆಗೆ ಮೆದುಳಿನ ಆರೋಗ್ಯದ ಮೇಲೂ ಗಮನ ಹರಿಸುವುದು ಅಗತ್ಯವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ನೆನಪಿನ ಶಕ್ತಿ ಕುಂದುವುದು, ಏಕಾಗ್ರತೆ ಕಡಿಮೆಯಾಗುವುದು ಮತ್ತು ಯೋಚನಾ ಸಾಮರ್ಥ್ಯದಲ್ಲಿ ಬದಲಾವಣೆ ಕಾಣುವುದು ಸಾಮಾನ್ಯವಾಗಿ ಬಿಟ್ಟಿದೆ. ಈ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ (WHO) ಮೆದುಳಿನ ಆರೋಗ್ಯವನ್ನು (Brain Health) ದೀರ್ಘಕಾಲ ಕಾಪಾಡಿಕೊಳ್ಳಲು ಕೆಲವು ಪ್ರಮುಖ ಜೀವನಶೈಲಿ ಸಲಹೆಗಳನ್ನು ನೀಡಿದೆ. ಇದನ್ನು ಸರಿಯಾದ ರೀತಿಯಲ್ಲಿ ಪಾಲನೆ ಮಾಡಿದಲ್ಲಿ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಬಹುದು. ಹಾಗಾದರೆ ಡಬ್ಲ್ಯೂಎಚ್ಓ ಪ್ರಕಾರ ಮೆದುಳು ಆರೋಗ್ಯವಾಗಿರಲು ಯಾವ ರೀತಿಯ ಅಭ್ಯಾಸಗಳನ್ನು ಪಾಲಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಡಬ್ಲ್ಯೂಎಚ್ಓ ಶಿಫಾರಸು ಮಾಡಿರುವ ಆರೋಗ್ಯಕರ ಅಭ್ಯಾಸಗಳು:

ಮೆದುಳು ಆರೋಗ್ಯವಾಗಿರಲು ಪ್ರತಿದಿನ ನಿಯಮಿತವಾಗಿ ದೈಹಿಕ ಚಟುವಟಿಕೆ ಅಥವಾ ವ್ಯಾಯಾಮ ಮಾಡಬೇಕು. ಪೌಷ್ಟಿಕ ಮತ್ತು ಸಮತೋಲಿತ ಆಹಾರ ಸೇವಿಸಬೇಕು. ಧೂಮಪಾನದಿಂದ ದೂರವಿದ್ದು, ಮದ್ಯಪಾನವನ್ನು ಸಾಧ್ಯವಾದಷ್ಟು ಕಡಿಮೆ ಮಾಡುವುದು ಉತ್ತಮ. ಜೊತೆಗೆ ಹೊಸ ವಿಷಯಗಳನ್ನು ಕಲಿಯುವುದು, ಪುಸ್ತಕ ಓದುವುದು, ಒಗಟುಗಳನ್ನು ಬಿಡಿಸುವುದು ಹಾಗೂ ನೆನಪಿನ ಶಕ್ತಿಯನ್ನು ಹೆಚ್ಚಿಸುವ ಚಟುವಟಿಕೆಗಳಲ್ಲಿ ತೊಡಗುವುದು ಮೆದುಳಿನ ಕಾರ್ಯಕ್ಷಮತೆಯನ್ನು ಸುಧಾರಿಸಲು ಸಹಕಾರಿಯಾಗಿದೆ.

ಇದನ್ನೂ ಓದಿ: ಪ್ರತಿ ಸಣ್ಣ ಆರೋಗ್ಯ ಸಮಸ್ಯೆಗೂ ಔಷಧಿ ಸೇವಿಸುತ್ತೀರಾ? ಈ ಅಭ್ಯಾಸ ಎಷ್ಟು ಅಪಾಯಕಾರಿ ಗೊತ್ತಾ?

ಈ ಆರೋಗ್ಯ ಸಮಸ್ಯೆಗಳನ್ನು ನಿಯಂತ್ರಣದಲ್ಲಿಡಿ:

ಡಬ್ಲ್ಯೂಎಚ್ಓ ಪ್ರಕಾರ, ಅಧಿಕ ರಕ್ತದೊತ್ತಡ, ಮಧುಮೇಹ, ಹೆಚ್ಚಿದ ಕೊಲೆಸ್ಟ್ರಾಲ್, ಅಧಿಕ ತೂಕ, ಶ್ರವಣ ಸಮಸ್ಯೆ ಮತ್ತು ಖಿನ್ನತೆ (ಡಿಪ್ರೆಶನ್) ಮುಂತಾದ ಸಮಸ್ಯೆಗಳನ್ನು ನಿಯಂತ್ರಣದಲ್ಲಿ ಇಡುವುದು ಅಗತ್ಯ. ಇವುಗಳನ್ನು ನಿರ್ಲಕ್ಷಿಸಿದರೆ ಮೆದುಳಿನ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಬಹುದು. ಆದ್ದರಿಂದ ನಿಯಮಿತ ಆರೋಗ್ಯ ತಪಾಸಣೆ ಮತ್ತು ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುವುದು ಮುಖ್ಯ.

ಈ ಕೆಟ್ಟ ಅಭ್ಯಾಸಗಳಿಂದ ದೂರವಿರಿ;

ಧೂಮಪಾನ, ಅತಿಯಾದ ಮದ್ಯಪಾನ, ದೈಹಿಕ ಚಟುವಟಿಕೆಯ ಕೊರತೆ, ಅನಾರೋಗ್ಯಕರ ಆಹಾರ ಪದ್ಧತಿ ಹಾಗೂ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸುವುದು ಮೆದುಳಿನ ಕಾರ್ಯಕ್ಷಮತೆಯನ್ನು ಕುಗ್ಗಿಸಬಹುದು. ಆದ್ದರಿಂದ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಮತ್ತು ವೈದ್ಯರ ಸಲಹೆಗಳನ್ನು ಪಾಲಿಸುವುದು ದೀರ್ಘಕಾಲ ಮೆದುಳನ್ನು ಆರೋಗ್ಯವಾಗಿಡಲು ನೆರವಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *