Headlines

ಮೇಕೆದಾಟು ವಿವಾದ: ಮತ್ತೆ ತಮಿಳುನಾಡು ಕ್ಯಾತೆ; ಮಾತುಕತೆಗೆ ಸಿದ್ದ ಎಂದ ಕರ್ನಾಟಕ ಸಿಎಂ ಡಿಕೆಶಿ – Kannada News | Mekedatu Row: TN Governor Urges Legal Fight, While Karnataka CM DK Shivakumar Offers Talks to Resolve Dispute

ಮೇಕೆದಾಟು ಯೋಜನೆಗೆ ಮತ್ತೆ ತಮಿಳುನಾಡು ಕ್ಯಾತೆImage Credit source: PTI

ಬೆಂಗಳೂರು, ಜೂನ್​​ 18: ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದ್ದು, ಈ ಬಾರಿ ಸ್ವತಃ ಅಲ್ಲಿನ ರಾಜ್ಯಪಾಲರೇ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಮೇಕೆದಾಟು ಯೋಜನೆಯಿಂದ ತಮಿಳುನಾಡು ರೈತರಿಗೆ ಸಂಕಷ್ಟ ಎದುರಾಗಲಿದೆ ಎಂದು ವಿಧಾನಸಭೆಯಲ್ಲಿಯೇ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಹೇಳಿದ್ದು, ಕಾವೇರಿ ನೀರು ಪಡೆಯುವುದು ತಮಿಳುನಾಡಿನ ರೈತರ ಹಕ್ಕಾಗಿದೆ. ಹೀಗಾಗಿ ತಮಿಳುನಾಡು ಸರ್ಕಾರ ಯೋಜನೆ ತಡೆಯಲು ಕಾನೂನು ಹೋರಾಟ ನಡೆಸಬೇಕು ಎಂದವರು ಸಲಹೆ ನೀಡಿದ್ದಾರೆ.

‘ಚರ್ಚೆ ಮಾಡಲು ಸಿದ್ಧ’

ಮತ್ತೊಂದೆಡೆ ಮೇಕೆದಾಟು ಯೋಜನೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್​​, ಈ ಬಗ್ಗೆ ತಮಿಳುನಾಡು ಸಿಎಂ ಜೊತೆ ಮಾತುಕತೆಗೆ ನಾನು ಸಿದ್ಧನಿದ್ದೇನೆ. ನಾವೆಲ್ಲರೂ ಭಾರತೀಯರು. ತಮಿಳುನಾಡಿಗೆ ಕೊಡಬೇಕಾದ ನೀರನ್ನು ನಾವು ಕೊಡುತ್ತೇವೆ. ಮೊದಲು ಸಂಗ್ರಹ ಮಾಡಿಕೊಂಡು ಅವರಿಗೆ ನೀರು ಕೊಡ್ತೇವೆ. ನಾವೂ ಬದುಕಬೇಕು, ಅವರೂ ಬದುಕಬೇಕು. ಹೀಗಾಗಿ ಆದೇಶದ ಪ್ರಕಾರ ತಮಿಳುನಾಡಿಗೆ ನೀರು ಕೊಡುತ್ತೇವೆ. ಅವರ ಅನುಕೂಲತೆ, ನಮ್ಮ ಅನುಕೂಲತೆ ನೋಡಿಕೊಂಡು ನೀರು ನೀಡುತ್ತೇವೆ. ನಾವು ವಿಜಯ್​ಗೆ ಏನು ಮನವಿ ಮಾಡಬೇಕೋ ಮಾಡುತ್ತೇವೆ ಇದರಲ್ಲಿ ರಾಜಕಾರಣ ಏನೂ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ: CM ವಿಜಯ್‌ ಗೆ ಮೊದಲ ಶಾಕ್; ಮೇಕೆದಾಟುಗೆ ಅಡ್ಡಗಾಲು ಹಾಕಲು ಮುಂದಾದ ತಮಿಳುನಾಡಿಗೆ ಹಿನ್ನಡೆ

ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಯೋಜನೆಗೆ ತಡೆ ನೀಡಬೇಕೆಂದು ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ 2025 ನವೆಂಬರ್​​ನಲ್ಲಿ ವಜಾಗೊಳಿಸಿತ್ತು. ಆದರೆ ಈ ತೀರ್ಪನ್ನು ಮರುಪರಿಶೀಲನೆ ಮಾಡಬೇಕೆಂದು ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಜಾಯ್ ಮಾಲ್ಯ ಬಾಗ್ಚಿ, ವಿಪುಲ್ ಎಂ. ಪಂಚೋಲಿ ಅವರಿದ್ದ ಪೀಠ ವಜಾ ಮಾಡಿ ಇತ್ತೀಚೆಗಷ್ಟೇ ಆದೇಶ ಹೊರಡಿಸಿತ್ತು. ಮರು ಪರಿಶೀಲನಾ ಅರ್ಜಿಯ ವಿಷಯಗಳು ಮತ್ತು ಅದರೊಂದಿಗೆ ಲಗತ್ತಿಸಲಾದ ದಾಖಲೆಗಳನ್ನು ನಾವು ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ತೀರ್ಪಿನ ಪುನರ್ ಪರಿಶೀಲನೆ ಅಗತ್ಯ ಇಲ್ಲ ಎಂದು ಪೀಠ ತಿಳಿಸಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 2:35 pm, Thu, 18 June 26

Source link

Leave a Reply

Your email address will not be published. Required fields are marked *