ಮೈಸೂರು, (ಡಿಸೆಂಬರ್ 25): ನೈಟ್ರೋಜನ್ ಗ್ಯಾಸ್ ಸ್ಫೋಟಗೊಂಡು (Nitrogen Gas Blast) ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶ್ವವಿಖ್ಯಾತ ಮೈಸೂರು ಅರಮನೆ (Mysuru Palace) ಮುಂಭಾಗದಲ್ಲಿ ನಡೆದಿದೆ. ಇಂದು (ಡಿಸೆಂಬರ್ 25) ರಾತ್ರಿ ಪ್ಯಾಲೆಸ್ ಮುಂಭಾಗ ಬಲೂನ್‌ಗೆ ಗ್ಯಾಸ್ ತುಂಬಿಸುವಾಗ ಸ್ಫೋಟವಾಗಿದ್ದು, ಇದರ ತೀವ್ರತೆ ಎಷ್ಟಿತ್ತು ಎಂದರೆ ಸಿಲಿಂಡರ್ ಛಿದ್ರ ಛೀದ್ರವಾಗಿದೆ. ಸ್ಥಳಕ್ಕೆ ಕೆ ಆರ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು,ಈ ಸ್ಫೋಟಕ ಸಾಂಸ್ಕೃತಿಕ ನಗರಿ ಜನ ಬೆಚ್ಚಿಬಿದ್ದಿದ್ದಾರೆ.
ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ಘಟನೆ ಸಂಭವಿಸಿದ್ದು, ಬಲೂನ್‌ಗೆ ಗ್ಯಾಸ್ ತುಂಬುವ ವೇಳೆ ಬ್ಲಾಸ್ಟ್ ಆಗಿದೆ. ಬ್ಲಾಸ್ಟ್ ತೀವ್ರತೆಗೆ ಓರ್ವನ ದೇಹ ಛಿದ್ರ ಛಿದ್ರಗೊಂಡಿದೆ. ಇನ್ನು ಘಟನೆಯಲ್ಲಿ ಮೂವರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
