ಮೈಸೂರು, ಏಪ್ರಿಲ್ 19: ಕಾವೇರಿ ನದಿಯಲ್ಲಿ ಮುಳುಗಿ 6 ಜನ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆ K.R.ನಗರದ ಅರ್ಕೇಶ್ವರ ದೇಗುಲದ ಬಳಿ ನಡೆದಿದೆ. ಉರೂಸ್ ಹಿನ್ನೆಲೆ 8 ಜನರ ತಂಡ ದರ್ಗಾಕ್ಕೆ ಬಂದಿದ್ದು, ಈ ವೇಳೆ ನದಿಗೆ ಈಜಲು ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ. ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದು, ಉಳಿದ 6 ಜನ ನೀರುಪಾಲಾಗಿದ್ದಾರೆ. ಸ್ಥಳಕ್ಕೆ ಕೆ.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾಸಿನ್(23), ಫಾತಿಮ್(30), ಹುಮಾಯೂನ್(7), ನೇಹಾನ್(19), ಅಲೀಂ(13) ಸೇರಿ 6 ಜನ ಸಾವನ್ನಪ್ಪಿದ್ದಾರೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.
