ಕಲಬುರಗಿ, ಜುಲೈ 05: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಒಂದರ ಡ್ರೈವರ್ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಬಸ್ ಓಡಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕಲಬುರಗಿಯಿಂದ ಚಿಂಚೋಳಿ ಮಾರ್ಗದಲ್ಲಿ ಸಂಚರಿಸುವ ಈ ಬಸ್‌ನಲ್ಲಿ ಕಂಡಕ್ಟರ್ ಮೊಬೈಲ್ ಟಾರ್ಚ್ ಹಿಡಿದರೆ, ಡ್ರೈವರ್ ಬಸ್ ಚಲಾಯಿಸಿದ್ದಾರೆ. ಕಳೆದ 15 ದಿನಗಳಿಂದ ಈ ಬಸ್‌ನ ಹೆಡ್‌ಲೈಟ್‌ಗಳು ಕೆಟ್ಟು ಹೋಗಿದ್ದರೂ, ಸಾರಿಗೆ ಸಂಸ್ಥೆಯ ಅಧಿಕಾರಿಗಳು ಅದನ್ನು ದುರಸ್ತಿ ಮಾಡಿಸುವ ಗೋಜಿಗೆ ಹೋಗಿಲ್ಲ. ಕಲಬುರಗಿಯಿಂದ ಚಿಂಚೋಳಿ 90 ಕಿಲೋ ಮೀಟರ್ ದೂರವಿದ್ದು, ರಾತ್ರಿ ವೇಳೆ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಓಡಿಸುವುದು ಪ್ರಯಾಣಿಕರ ಜೀವಕ್ಕೆ ಆಪತ್ತು ತಂದಿದೆ. ಸಾರಿಗೆ ಅಧಿಕಾರಿಗಳ ಈ ನಿರ್ಲಕ್ಷ್ಯಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಏನಾದರೂ ಅನಾಹುತ ಸಂಭವಿಸಿದರೆ ಯಾರು ಹೊಣೆ ಎಂಬ ಪ್ರಶ್ನೆ ಎದುರಾಗಿದೆ.ಕೂಡಲೇ ಸಂಬಂಧಪಟ್ಟವರು ಇತ್ತ ಗಮನಹರಿಸಿ ಸಮಸ್ಯೆಯನ್ನು ಪರಿಹರಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.