Headlines

‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ – Kannada News | Basanagouda Patil Yatnal is a Monkey Breed: Congress MLA Pradeep Eshwar Blasts BJP Leaders Over Hate Speech Allegations

ಬೆಂಗಳೂರು, ಜೂನ್ 13: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತಮ್ಮನ್ನು ದೇಶದ್ರೋಹಿ ಎಂದಿರುವುದರ ಜತೆಗೆ ದ್ವೇಷ ಭಾಷಣ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಪತ್ರ ಬರೆದು ದೂರು ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್, ದ್ವೇಷ ಭಾಷಣದ ಆರೋಪವನ್ನು ತಳ್ಳಿಹಾಕಿದ್ದಾರೆ. ಅಲ್ಲದೆ, ಛಲವಾದಿ ನಾರಾಯಣಸ್ವಾಮಿ ಮತ್ತು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ದ್ವೇಷ ಭಾಷಣದ ಪಿತಾಮಹರು ಎಂದು ತೀವ್ರ ವಾಗ್ದಾಳಿ ನಡೆಸಿದರು.

ಛಲವಾದಿ ನಾರಾಯಣಸ್ವಾಮಿ ಅವರನ್ನು ಬುದ್ಧಿವಂತರು ಮತ್ತು ಪ್ರಜ್ಞಾವಂತರು ಎಂದು ಭಾವಿಸಿದ್ದೆ. ಆದರೆ, ಅವರು ನೀಡಿದ ದೂರು ನೋಡಿದ ನಂತರ ಅವರಿಗೆ ಜ್ಞಾನವಿಲ್ಲ ಎಂದು ಅನಿಸುತ್ತಿದೆ. ಭಾಷಣದ ವೀಡಿಯೊವನ್ನು ನೋಡದೆ ಹೋಮ್ ಮಿನಿಸ್ಟರ್ ಮತ್ತು ಸಿಎಂ ಅವರಿಗೆ ಪತ್ರ ಬರೆಯುವುದು ಸರಿಯಲ್ಲ. ವಿಡಿಯೋದಲ್ಲಿ, ‘‘ಅಂಧಭಕ್ತರು ಮತ್ತು ದೇಶದ್ರೋಹಿಗಳು ಈ ದೇಶಕ್ಕೆ ಮಾರಕ’’ ಎಂದು ಹೇಳಿದ್ದೇನೆಯೇ ಹೊರತು, ನಿರ್ದಿಷ್ಟವಾಗಿ ಯಾರನ್ನೂ ದೇಶದ್ರೋಹಿಗಳು ಎಂದು ಕರೆದಿಲ್ಲ. ಛಲವಾದಿ ನಾರಾಯಣಸ್ವಾಮಿ ಅವರ ಮನಸ್ಸಿನಲ್ಲಿರುವುದನ್ನೇ ಹೊರಹಾಕುತ್ತಿದ್ದಾರೆ ಎಂದು ಪ್ರದೀಪ್ ಈಶ್ವರ್ ಆರೋಪಿಸಿದರು. ದ್ವೇಷ ಭಾಷಣದ ಮೊದಲ ಪಿತಾಮಹರೇ ಛಲವಾದಿ ನಾರಾಯಣಸ್ವಾಮಿ ಮತ್ತು ಎರಡನೇ ಪಿತಾಮಹ ಬಸನಗೌಡ ಪಾಟೀಲ್ ಯತ್ನಾಳ್ ಎಂದು ಕಟುವಾಗಿ ಟೀಕಿಸಿದರು. ಅಲ್ಲದೆ, ‘ಆ ಯತ್ನಾಳ್ ನೋಡಿದ್ರೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದಾನೆ. ಅದು ಯಾವುದೋ ಒಂದು ಕೋತಿಯ ಬ್ರೀಡ್’ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *