ಕೊಪ್ಪಳ, ಮೇ 19: ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅವರು ಶಾಲಾ ಹಾಜರಾತಿಯ ಸಂದರ್ಭದಲ್ಲಿ ಯೆಸ್ ಸರ್ ಬದಲು ಜೈ ಶ್ರೀರಾಮ್ ಎಂದು ಹೇಳಬೇಕೆಂಬ ಬಸನಗೌಡ ಪಾಟೀಲ್ ಯತ್ನಾಳ್ ಅವರ ಕರೆಯನ್ನು ಸಂಪೂರ್ಣವಾಗಿ ಬೆಂಬಲಿಸಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ರೆಡ್ಡಿ, ಈ ವಿಷಯಕ್ಕೆ ನೂರಕ್ಕೆ ನೂರು ನನ್ನ ಬೆಂಬಲ ಇದೆ ಎಂದು ಘೋಷಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರೆಡ್ಡಿ, ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುತ್ತಿದೆ. ಹಿಜಾಬ್ ವಿವಾದದ ಕುರಿತು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ವಿಷಯವಿದ್ದರೂ, ಸರ್ಕಾರವು ಆದೇಶ ಹೊರಡಿಸಿದೆ. ಕಾಂಗ್ರೆಸ್ ಪಕ್ಷವು ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
