ಯಶಸ್ವಿಯಾಗಿ 25 ದಿನ ಪೂರೈಸಿದ ‘ಲವ್ ಮಾಕ್ಟೇಲ್ 3’ ಸಿನಿಮಾ; ಹ್ಯಾಟ್ರಿಕ್ ಗೆಲುವು – Kannada News | Darling Krishna starrer Love Mocktail 3 movie completes 25 days successful run in theatres

ಮಾರ್ಚ್ 19ರಂದು ಕನ್ನಡದ ‘ಲವ್ ಮಾಕ್ಟೇಲ್ 3’ ಸಿನಿಮಾ ಬಿಡುಗಡೆ ಆಗಿತ್ತು. ಡಾರ್ಲಿಂಗ್ ಕೃಷ್ಣ (Darling Krishna) ನಿರ್ದೇಶನ ಮಾಡಿ, ನಾಯಕನಾಗಿ ನಟಿಸಿರುವ ಈ ಸಿನಿಮಾದ ರಿಲೀಸ್ ಅಷ್ಟು ಸುಲಭವಾಗಿ ಇರಲಿಲ್ಲ. ಭಾರಿ ನಿರೀಕ್ಷೆ ಮೂಡಿಸಿದ್ದ ‘ಧುರಂಧರ್ 2’ ಚಿತ್ರದ ಎದುರು ಕನ್ನಡದ ಈ ಸಿನಿಮಾ ರಿಲೀಸ್ ಆಗಬೇಕಿತ್ತು. ಪ್ರಬಲ ಪೈಪೋಟಿಯ ನಡುವೆಯೂ ಈ ಸಿನಿಮಾ ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿಕೊಂಡಿದೆ. ಇದರಿಂದ ಚಿತ್ರತಂಡಕ್ಕೆ ಬಹಳ ಖುಷಿ ಆಗಿದೆ. ವಿಶೇಷವಾಗಿ ಫ್ಯಾಮಿಲಿ ಪ್ರೇಕ್ಷಕರು ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾದ ಕೈ ಹಿಡಿದಿದ್ದಾರೆ.

ಬಿಡುಗಡೆಯಾದ ಮೊದಲ ದಿನದಿಂದಲೇ ‘ಲವ್ ಮಾಕ್ಟೇಲ್ 3’ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಈ ಸಿನಿಮಾದಲ್ಲಿನ ಎಮೋಷನಲ್ ಕಥೆಗೆ ಜನರು ಫಿದಾ ಆದರು. ಈ ಚಿತ್ರ ದಿನದಿಂದ ದಿನಕ್ಕೆ ಉತ್ತಮ ಪ್ರದರ್ಶನ ಕಂಡಿತ್ತು. ಇದೀಗ 25 ದಿನಗಳನ್ನು ಯಶಸ್ವಿಯಾಗಿ ದಾಟುವ ಮೂಲಕ 2026ರಲ್ಲಿ ಸೂಪರ್ ಹಿಟ್ ಆದ ಮೊದಲ ಕನ್ನಡ ಸಿನಿಮಾ ಎಂಬ ಖ್ಯಾತಿಗೆ ಪಾತ್ರವಾಗಿದೆ.

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮುಂದಕ್ಕೆ ಹೋಗುತ್ತಲೇ ಮಾರ್ಚ್ 19ರಂದು ‘ಲವ್ ಮಾಕ್ಟೇಲ್ 3’ ಸಿನಿಮಾವನ್ನು ವಿತರಣೆ ಮಾಡಲು ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ನಿರ್ಧರಿಸಿತು. ಪಕ್ಕಾ ಪ್ಲ್ಯಾನ್ ಪ್ರಕಾರ ರಾಜ್ಯಾದ್ಯಂತ ಈ ಚಿತ್ರವನ್ನು ವಿತರಣೆ ಮಾಡಿತು. ದೇಶದಾದ್ಯಂತ ‘ಧುರಂಧರ್ 2’ ಸಿನಿಮಾ ಚಿತ್ರಮಂದಿರಗಳನ್ನು ಬಾಚಿಕೊಂಡಿತು. ಅದರ ನಡುವೆಯೂ ‘ಲವ್ ಮಾಕ್ಟೇಲ್ 3’ ಸಿನಿಮಾ ತಮ್ಮ ಸಾಮರ್ಥ್ಯವನ್ನು ಸಾಬೀತು ಮಾಡಿತು.

25 ದಿನಗಳ ಯಶಸ್ವಿ ಪ್ರದರ್ಶನದ ಗೆಲುವಿಗೆ ಕಾರಣರಾದ ಪ್ರೇಕ್ಷಕರಿಗೆ ಡಾರ್ಲಿಂಗ್ ಕೃಷ್ಣ ಅವರು ಧನ್ಯವಾದ ಅರ್ಪಿಸಿದ್ದಾರೆ. ‘ಲವ್ ಮಾಕ್ಟೇಲ್’ ಸರಣಿಯ ಹ್ಯಾಟ್ರಿಕ್ ಗೆಲುವನ್ನು ಅವರು ಸಂಭ್ರಮಿಸಿದ್ದಾರೆ. ‘ಕ್ರಿಸ್‌ಮಿ’ ಬ್ಯಾನರ್ ಮೂಲಕ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿ ಗೆಲುವು ಕಂಡಿದ್ದಾರೆ.

ಇದನ್ನೂ ಓದಿ: ಅಂತ್ಯಕಂಡ ‘ಲವ್ ಮಾಕ್ಟೇಲ್ 3’ ವಿವಾದ; ಕ್ಷಮೆ ಕೇಳಿ ಪ್ರಕರಣ ಸುಖಾಂತ್ಯ

ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ಸಂವೃತಾ, ಅಮೃತಾ ಅಯ್ಯಂಗಾರ್, ದಿಲೀಪ್ ರಾಜ್, ರೇಚಲ್ ಡೇವಿಡ್, ಶ್ವೇತಾ ಪ್ರಸಾದ್, ನಯೇರಾ, ಜಗದೀಶ್, ಗಿರಿರಾಜ್, ಅಭಿಲಾಶ್, ದಳಪತಿ ಮುಂತಾದವರು ನಟಿಸಿದ್ದಾರೆ. ಶ್ರೀ ಕ್ರೇಜಿ ಮೈಂಡ್ಸ್ ಅವರು ಛಾಯಾಗ್ರಹಣ ಮತ್ತು ಸಂಕಲನ ಮಾಡಿದ್ದಾರೆ. ನಕುಲ್ ಅಭ್ಯಂಕರ್ ಅವರು ಸಂಗೀತ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *