ಕನ್ನಡ ಚಿತ್ರರಂಗದ ಹೆಮ್ಮೆಯ ನಟ ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ (Toxic Movie) ಬಿಡುಗಡೆಗೆ ಸಜ್ಜಾಗಿದೆ. ಈ ಬಿಗ್ ಬಜೆಟ್ ಸಿನಿಮಾ ಆಗಸ್ಟ್ 26ರಂದು ಜಾಗತಿಕ ಮಟ್ಟದಲ್ಲಿ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಹಲವು ದಿನಗಳ ಕಾಯುವಿಕೆಯ ನಂತರ ಸಿನಿಮಾ ಆಗಮಿಸುತ್ತಿದೆ. ಪ್ರೇಕ್ಷಕರಲ್ಲಿ ಮತ್ತು ಅಭಿಮಾನಿಗಳಲ್ಲಿ ಚಿತ್ರದ ಮೇಲಿನ ನಿರೀಕ್ಷೆಗಳು ಗಗನಕ್ಕೇರಿವೆ. ಈಗ ಸಿನಿಮಾದ ಸೆನ್ಸಾರ್ ಬಗ್ಗೆ ಚರ್ಚೆ ಶುರುವಾಗಿದೆ.
ಇತ್ತೀಚೆಗೆ ‘ಟಾಕ್ಸಿಕ್’ ಸಿನಿಮಾ ಸೆನ್ಸಾರ್ ಮಂಡಳಿಯಿಂದ ‘ಎ’ ಸರ್ಟಿಫಿಕೇಟ್ ಪಡೆದುಕೊಂಡಿದೆ ಎಂದು ವರದಿ ಆಗಿದೆ. ಈ ಗ್ಯಾಂಗ್‌ಸ್ಟರ್ ಆಕ್ಷನ್ ಡ್ರಾಮಾ ಸಿನಿಮಾಗೆ ಸುದೀರ್ಘವಾದ ಅವಧಿ ಇದೆ ಎನ್ನಲಾಗಿದೆ. ಚಿತ್ರದ ಒಟ್ಟು ರನ್‌ಟೈಮ್ 194 ನಿಮಿಷಗಳು. ಅಂದರೆ ಬರೋಬ್ಬರಿ 3 ಗಂಟೆ 14 ನಿಮಿಷಗಳ ಕಾಲ ಸಿನಿಮಾ ಪ್ರಸಾರವಾಗಲಿದೆ. ಇಷ್ಟೊಂದು ದೊಡ್ಡ ಅವಧಿಯ ಚಿತ್ರಕಥೆ ಪ್ರೇಕ್ಷಕರನ್ನು ಕೊನೆವರೆಗೂ ಕುತೂಹಲದಿಂದ ಹಿಡಿದಿಟ್ಟುಕೊಳ್ಳಬೇಕು. ಇದು ತಂಡಕ್ಕೆ ಇರೋ ದೊಡ್ಡ ಚಾಲೆಂಜ್.
ಈ ಚಿತ್ರಕ್ಕೆ ಗೀತು ಮೋಹನ್‌ದಾಸ್ ಅವರು ನಿರ್ದೇಶನ ಮಾಡಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆಯ ವೆಂಕಟ್ ನಾರಾಯಣ ಅವರು ಬಂಡವಾಳ ಹೂಡಿದ್ದಾರೆ. ಯಶ್ ಅವರು ಕಥಾಬರಹದಲ್ಲಿ ಸಾಥ್ ನೀಡಿದ್ದಾರೆ. ಈ ಸಿನಿಮಾ ಒಂದೇ ಬಾರಿಗೆ ಹಲವು ಭಾಷೆಗಳಲ್ಲಿ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸಿನಿಮಾ ಮೂರು ಕಾಲು ಗಂಟೆ ಇದೆ ಎಂಬ ವಿಷಯ ಅಭಿಮಾನಿಗಳಿಗೆ ಖುಷಿ ತಂದಿದೆ.
ಇದನ್ನೂ ಓದಿ: ‘ಟಾಕ್ಸಿಕ್’ ಚಿತ್ರದಲ್ಲಿ ಒಂದಲ್ಲ, ಎರಡಲ್ಲ ಹತ್ತು ಹಾಡುಗಳು; ಅಚ್ಚರಿಯ ವಿಷಯ ರಿವೀಲ್
‘ಟಾಕ್ಸಿಕ್’ ಪಾತ್ರವರ್ಗ ಹಾಗೂ ರಿಲೀಸ್ ದಿನಾಂಕ:
‘ಕೆಜಿಎಫ್ 2’ ಬ್ಲಾಕ್‌ಬಸ್ಟರ್ ಯಶಸ್ಸಿನ ನಂತರ ಯಶ್ ಅವರ 19ನೇ ಸಿನಿಮಾವಾಗಿ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್’ ಮೂಡಿಬರುತ್ತಿದೆ. ಈ ಚಿತ್ರದಲ್ಲಿ ನಾಯಕಿಯಾಗಿ ಕಿಯಾರಾ ಅಡ್ವಾಣಿ ನಟಿಸಿದ್ದಾರೆ. ಜೊತೆಗೆ ನಯನತಾರಾ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್ ಮತ್ತು ಹುಮಾ ಖುರೇಷಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಅದ್ದೂರಿ ಪ್ಯಾನ್-ಇಂಡಿಯಾ ಸಿನಿಮಾವು ಬರುವ ಆಗಸ್ಟ್ 26ರಂದು ಜಾಗತಿಕವಾಗಿ ಬಿಡುಗಡೆಯಾಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
