ಯಾದಗಿರಿ, ಏಪ್ರಿಲ್ 17: ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಒಂದೇ ಕುಟುಂಬದ 6 ಜನ ಸಜೀವದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಬಳಿ ನಡೆದಿದೆ. ಘಟನೆ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್ಪಿ ಪೃಥ್ವಿಕ್ ಶಂಕರ್, ಕಾರಿನಲ್ಲಿ ಒಂದೇ ಕುಟುಂಬದ ಎಂಟು ಜನ ಪ್ರಯಾಣಿಸುತ್ತಿದ್ದರು. ಇದರಲ್ಲಿ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವನ್ನಪ್ಪಿದ ಎಲ್ಲರೂ ರಾಯಚೂರು ಜಿಲ್ಲೆಯ ಶಿರವಾರ್ ಪಟ್ಟಣ ನಿವಾಸಿಗಳು. ಸುರಪುರ ಪಟ್ಟಣದ ವೇಣುಗೋಪಾಲ ಸ್ವಾಮಿ ದರ್ಶನ ಮುಗಿಸಿಕೊಂಡು ವಾಪಸ್ ಹೋಗುವಾಗ ಕಾರು ಓವರ್ ಟೆಕ್ ಮಾಡಲು ಹೋದಾಗ ಘಟನೆ ಸಂಭವಿಸಿದೆ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.