Headlines

ಯಾರನ್ನು ಕೇಳಿದ್ರೂ ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಅಂತಿದ್ದಾರೆ, ನಾವೂ ಅದ್ನೇ ಹೇಳ್ತೀವಿ: ಜಿ ಪರಮೇಶ್ವರ! – Kannada News | Everyone says BJP will win in Assam, we say the same: Karnataka Home Minister G Parameshwara

ಬೆಂಗಳೂರು, ಮೇ 1: ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಷ್ಟೇನೂ ಆಶಾವಾದಿಯಾಗಿಲ್ಲ. ಸಮೀಕ್ಷೆಗಳು ಮಾತ್ರವಲ್ಲ, ಜನರೂ ಎಲ್ಲರೂ ಅಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಹೇಳುತ್ತಿದ್ದಾರೆ. ನಾವೂ ಹಾಗೆಯೇ ಭಾವಿಸಿದ್ದೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಅಸ್ಸಾಂನಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಸಮೀಕ್ಷೆಗಳು ಹೇಳುತ್ತಿವೆ ಮತ್ತು ನಮ್ಮೊಂದಿಗೆ ಮಾತನಾಡಿದವರೂ ಇದನ್ನೇ ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಕೇರಳದಲ್ಲಿ ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬರುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ ಅವರು, ಕೆಲವು ಅಧಿಕಾರಿಗಳು ಹಾಗೂ ಅಬ್ಸರ್ವರ್‌ಗಳ ಮಾತುಕತೆಯಿಂದ ತಿಳಿದು ಬಂದ ಪ್ರಕಾರ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಅಧಿಕಾರಕ್ಕೆ ಬರುವ ಅವಕಾಶವಿದೆ ಎಂದು ಹೇಳಿದ್ದಾರೆ. ಮಾಧ್ಯಮ ವರದಿಗಳು ಮತ್ತು ಅವರ ಜನಪ್ರಿಯತೆಯನ್ನು ಗಮನಿಸಿದರೆ ಅವರು ಮತ್ತೆ ಅಧಿಕಾರಕ್ಕೆ ಬರಬಹುದು ಎಂದಿದ್ದಾರೆ. ತಮಿಳುನಾಡಿನಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಪರಮೇಶ್ವರ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *