ನವದೆಹಲಿ, ಜುಲೈ 23: ಕಾಕ್ರೋಚ್ ಜನತಾ ಪಾರ್ಟಿಯ (CJP) ಪ್ರತಿನಿಧಿಗಳನ್ನು ಚರ್ಚೆಗೆ ಬರುವಂತೆ ಕೇಂದ್ರ ಸರ್ಕಾರ 4ನೇ ಬಾರಿಗೆ ಆಹ್ವಾನಿಸುತ್ತಿದೆ ಎಂದು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ (Jitendra Singh) ಇಂದು ತಿಳಿಸಿದ್ದಾರೆ. ಚರ್ಚೆಗಾಗಿ ಸರ್ಕಾರ ಈಗಾಗಲೇ 4 ಅಧಿಕೃತ ಪ್ರಸ್ತಾವನೆಗಳನ್ನು ಕಳುಹಿಸಿಕೊಟ್ಟಿದ್ದು, ಯಾವುದೇ ಸಮಯದಲ್ಲಿಯಾದರೂ ಮಾತುಕತೆ ನಡೆಸಲು ಮುಕ್ತವಾಗಿದೆ ಎಂದು ಅವರು ಹೇಳಿದ್ದಾರೆ. ಈ ಪರಿಷ್ಕೃತ ಪ್ರಸ್ತಾವನೆಯ ಕುರಿತು ಮಾತನಾಡಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ನಿನ್ನೆ ಮಧ್ಯಾಹ್ನದಿಂದಲೇ ಸಿಜೆಪಿ ಪ್ರತಿನಿಧಿಗಳಿಗೆ ಆಹ್ವಾನ ಕಳುಹಿಸಲಾಗಿದೆ. ನಿನ್ನೆ ಮಧ್ಯಾಹ್ನದಿಂದ ಇದುವರೆಗೂ 4 ಬಾರಿ ಅವರನ್ನು ಮಾತುಕತೆಗೆ ಆಹ್ವಾನಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ವಿದ್ಯಾರ್ಥಿ ಸಂಘಟನೆಯ ಅನುಕೂಲಕ್ಕೆ ತಕ್ಕಂತೆ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಿದೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರ ಕಚೇರಿ ಅಥವಾ ನಿವಾಸ ಎರಡದಲ್ಲಿ ಎಲ್ಲಿ ಬೇಕಾದರೂ ಸಭೆಗಳನ್ನು ನಡೆಸಬಹುದು ಎಂದು ಜಿತೇಂದ್ರ ಸಿಂಗ್ ಹೇಳಿದ್ದಾರೆ.
छात्रों और युवाओं से विनम्र अपील ! pic.twitter.com/8uoZtQQtW8
— Dr Jitendra Singh (@DrJitendraSingh) July 23, 2026
ಇದನ್ನೂ ಓದಿ: ಸಂಧಾನದ ವೇಳೆ ಬೇಡಿಕೆ ಬದಲಾಯಿಸಿದ ರಾಹುಲ್ ಗಾಂಧಿ; ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಆರೋಪ
“ನಾವು ಯಾವುದೇ ಪ್ರತಿಷ್ಠೆಯ ಬಗ್ಗೆ ಯೋಚಿಸುತ್ತಿಲ್ಲ. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮತ್ತು ನಾನು ಇಬ್ಬರೂ ಚರ್ಚೆಯಲ್ಲಿ ಭಾಗವಹಿಸಲಿದ್ದೇವೆ. ಮಾತುಕತೆಯ ಮೂಲಕವೇ ನಾವು ಪರಿಹಾರ ಕಂಡುಕೊಳ್ಳಬಹುದು. ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಮತ್ತು ಮಾತುಕತೆಯ ಮೂಲಕ ಪ್ರತಿಯೊಂದು ಸಮಸ್ಯೆಯನ್ನು ಬಗೆಹರಿಸುವುದೇ ಸರ್ಕಾರದ ಮುಖ್ಯ ಆದ್ಯತೆಯಾಗಿದೆ” ಎಂದು ಜಿತೇಂದ್ರ ಸಿಂಗ್ ಪುನರುಚ್ಚರಿಸಿದ್ದಾರೆ.
#WATCH | Delhi | On updated proposal for talks with Cockroach Janta Party, Union Minister Dr Jitendra Singh says, “The govt has sent four formal proposals for discussions with their representatives since last afternoon…This is a standing invitation to all our youth friends that… pic.twitter.com/PAQ6PbeNIa
— ANI (@ANI) July 23, 2026
ಇದಕ್ಕೂ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಪೇಪರ್ ಲೀಕ್ ಪ್ರಕರಣಗಳಲ್ಲಿ ಭಾಗಿಯಾದವರಿಗೆ ತುರ್ತು ನ್ಯಾಯ ಒದಗಿಸಲು ಮತ್ತು ಕಠಿಣ ಶಿಕ್ಷೆ ವಿಧಿಸಲು ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದರು.
#WATCH | Delhi | On updated proposal for talks with Cockroach Janta Party, Union Minister Dr Jitendra Singh says, “I wish to share that in the last 24 hours as many as four offers were made to the student representatives for a dialogue. It is my humble appeal to the students on… pic.twitter.com/ytUgOiORui
— ANI (@ANI) July 23, 2026
ಇದನ್ನೂ ಓದಿ: ನೀಟ್ ಪೇಪರ್ ಸೋರಿಕೆ: ಮೌನ ಮುರಿದ ಪ್ರಧಾನಿ, ಫಾಸ್ಟ್ ಟ್ರ್ಯಾಕ್ ಕೋರ್ಟ್ ಮಾಡಿ ಅಪರಾಧಿಗಳಿಗೆ ಶಿಕ್ಷೆ ಕೊಡ್ತೀವಿ ಎಂದ ಮೋದಿ
ನೀಟ್ (NEET) ಪೇಪರ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಾವಿರಾರು ವಿದ್ಯಾರ್ಥಿಗಳು ಸಂಸತ್ತಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಈ ಸಂಧಾನ ಮಾತುಕತೆಯ ಆಫರ್ ಬಂದಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
