ಧಾರವಾಡ, (ಫೆಬ್ರವರಿ 26): ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಮಂಜುನಾಥ ಗಾಣಿಗೇರ(29) ಎನ್ನುವ ಯುವಕನನ್ನು ಕೊಂದು ಹೈವೇನಲ್ಲಿ ಬಿಸಾಡಿ ಹೋಗಿದ್ದು, ಈ ಸಂಬಮಧ ಪ್ರಕರಣ ದಾಖಲಿಸಿಕೊಂಡಿದ್ದ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಕೊಲೆಗಾರರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಹತ್ಯೆಯ ರಹಸ್ಯ ಬಯಲಾಗಿದೆ. ಇನ್ನು ಈ ಪ್ರಕರಣದ ಬಗ್ಗೆ ಎಸ್ಪಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಕೊಲೆ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ.
