ಬೆಂಗಳೂರು, ಮೇ 24: ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ವಿಚಾರ ಸಂಬಂಧ ದೀಪಿಕಾ ರೆಡ್ಡಿ ಮಾಡಿರುವ ಆರೋಪ ಸುಳ್ಳು ಎಂದು ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ದಿವ್ಯಾ ಹೇಳಿದ್ದಾರೆ. ಸಭೆ ಶುರುವಾದಾಗ ಗಲಾಟೆ ಮಾಡಬೇಕಂತಲೇ ಬಂದು ಕೆಲವರು ಸುಳ್ಳು ಆರೋಪ ಮಾಡಿದ್ದಾರೆ. ಹೆಣ್ಣು ಮಕ್ಕಳಿಗೆ ಸುರಕ್ಷತೆ ಇಲ್ಲ ಎಂಬುದನ್ನು ನಾವು ಒಪ್ಪಲ್ಲ. ದೀಪಿಕಾ ರೆಡ್ಡಿ 12 ಲಕ್ಷ ಮತ ತೆಗೆದುಕೊಂಡಿದ್ದೇನೆ ಅಂತಾರೆ. JDSಗೆ ಹೋಗಿದ್ದ ದೀಪಿಕಾ ರೆಡ್ಡಿ ಮತ್ತೆ ಕಾಂಗ್ರೆಸ್ಗೆ ಬಂದಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರು ಚೆನ್ನಾಗಿ ಕೆಲಸ ಮಾಡ್ತಿದ್ದಾರೆ ಎಂದು ದಿವ್ಯಾ ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
