ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಬಹಳ ದೊಡ್ಡದಾಗಿ ನಿರ್ಮಾಣ ಆಗುತ್ತಿದೆ. ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಾಗ ಚಿತ್ರತಂಡದಿಂದ ಒಂದಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಾಗುತ್ತಿದೆ. ಸದ್ಯದಲ್ಲೇ ಈ ಸಿನಿಮಾದ ಹಾಡುಗಳ ಬಿಡುಗಡೆ ಆಗಲಿವೆ. ಪ್ರತಿಷ್ಠಿತ ‘ಜೀ ಮ್ಯೂಸಿಕ್’ (Zee Music) ಕಂಪನಿಯು ಈ ಸಿನಿಮಾದ ಆಡಿಯೋ ರೈಟ್ಸ್ ಪಡೆದುಕೊಂಡಿದೆ. ಅಂದಹಾಗೆ, ‘ಟಾಕ್ಸಿಕ್’ ಸಿನಿಮಾಗಾಗಿ ರವಿ ಬಸ್ರೂರು (Ravi Basrur) ಸೇರಿದಂತೆ ಒಟ್ಟು 5 ಮಂದಿ ಸಂಗೀತ ನಿರ್ದೇಶಕರು ಕೆಲಸ ಮಾಡಿದ್ದಾರೆ! ಆ ಕಾರಣದಿಂದ ಯಶ್ ಅಭಿಮಾನಿಗಳಿಗೆ ಈ ಚಿತ್ರದ ಮೇಲೆ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ.
‘ಟಾಕ್ಸಿಕ್’ ಸಿನಿಮಾದ ಆಲ್ಬಂ ಯಾವ ರೀತಿ ಇರಲಿದೆ ಎಂಬ ಮಾಹಿತಿ ಸಿಕ್ಕಿದೆ. ಸಿನಿಮಾದ ಮೆರುಗು ಹೆಚ್ಚಿಸಲು ಐವರು ಪ್ರತಿಭಾವಂತ ಸಂಗೀತ ನಿರ್ದೇಶಕರ ಸಮಾಗಮ ಆಗಿದೆ. ಈ ಚಿತ್ರದಲ್ಲಿ ಒಟ್ಟು 6 ಹಾಡುಗಳು ಇರಲಿವೆ. ರವಿ ಬಸ್ರೂರು ಅವರು ಹಿನ್ನೆಲೆ ಸಂಗೀತದ ಜತೆಗೆ ಕೇವಲ ಒಂದು ಹಾಡಿಗೆ ಸಂಗೀತ ನೀಡಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ.
ಬಾಲಿವುಡ್ನ ಖ್ಯಾತ ಸಂಗೀತ ನಿರ್ದೇಶಕ ವಿಶಾಲ್ ಮಿಶ್ರಾ ಅವರು 4 ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ, ತನಿಷ್ಕ್ ಬಾಗ್ಜಿ ಅವರು ಅರ್ಸ್ಲಾನ್ ನಿಜಾಮಿ ಮತ್ತು ಫಹೀಮ್ ಅಬ್ದುಲ್ಲಾ ಜೊತೆ ಸೇರಿ ಒಂದು ಹಾಡಿಗೆ ಸಂಗೀತ ನೀಡಿದ್ದಾರೆ. ಈ ಎಲ್ಲ ಪ್ರತಿಭಾವಂತರ ಸಂಗಮ ಆಗಿರುವುದರಿಂದ ‘ಟಾಕ್ಸಿಕ್’ ಸಿನಿಮಾದ ಹಾಡುಗಳ ಮೇಲೆ ಹೈಪ್ ಹೆಚ್ಚಾಗಿದೆ.
ಗೀತು ಮೋಹನ್ದಾಸ್ ಅವರು ‘ಟಾಕ್ಸಿಕ್’ ಸಿನಿಮಾಗೆ ನಿರ್ದೇಶನ ಮಾಡಿದ್ದು, ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ಬಂಡವಾಳ ಹೂಡಿದೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್ಗಳು ಧೂಳೆಬ್ಬಿಸಿವೆ. ಯಶ್ ಜೊತೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಮುಂತಾದ ಕಲಾವಿದರು ಅಭಿನಯಿಸಿದ್ದಾರೆ. ಮಾರ್ಚ್ 19ರಂದು ಈ ಸಿನಿಮಾ ರಿಲೀಸ್ ಆಗಲಿದೆ.
ಇದನ್ನೂ ಓದಿ: 2 ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ರವಿ ಬಸ್ರೂರು: ತೆಲುಗು ವೇದಿಕೆಯಲ್ಲಿ ಎಮೋಷನಲ್ ಮಾತು
‘ಟಾಕ್ಸಿಕ್’ ಸಿನಿಮಾದ ಕನ್ನಡ, ಹಿಂದಿ, ಮಲಯಾಳಂ, ತೆಲುಗು, ತಮಿಳು ವರ್ಷನ್ಗಳ ಆಡಿಯೋ ಹಕ್ಕುಗಳನ್ನು ‘ಜೀ ಮ್ಯೂಸಿಕ್’ ಕಂಪನಿ ಪಡೆದುಕೊಂಡಿದೆ. ಈ ಬಗ್ಗೆ ಕಂಪನಿಯ ಸುಜಲ್ ಪರೇಕ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ‘ಇದು ಕೆವಿನ್ ಮತ್ತು ಜೀ ಮ್ಯೂಸಿಕ್ ನಡುವಿನ ದೀರ್ಘಾವಧಿ ಸಂಬಂಧದ ಆರಂಭ’ ಎಂದು ನಿರ್ಮಾಪಕ ವೆಂಕಟ್ ಕೆ. ನಾರಾಯಣ ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On – 2:06 pm, Sun, 22 February 26
