ರಸ್ತೆ ಇಲ್ಲ, ವಿದ್ಯುತ್ ಸಂಪರ್ಕವಿಲ್ಲ! ಮೂಲಭೂತ ಸೌಕರ್ಯವಿಲ್ಲದೆ ಕಾಡಂಚಿನ ಜನರು ಕಂಗಾಲು

ರಸ್ತೆ ಇಲ್ಲ, ವಿದ್ಯುತ್ ಸಂಪರ್ಕವಿಲ್ಲ! ಮೂಲಭೂತ ಸೌಕರ್ಯವಿಲ್ಲದೆ ಕಾಡಂಚಿನ ಜನರು ಕಂಗಾಲು

ಚಾಮರಾಜನಗರ, ಮಾರ್ಚ್​ 28: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮ ಮೂಲಭೂತ ಸೌಕರ್ಯಗಳ ಕೊರತೆಯಿಂದ ನರಕಯಾತನೆ ಅನುಭವಿಸುತ್ತಿದೆ. ಗ್ರಾಮಕ್ಕೆ ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲಲ್ಲಿ ಜೀವನ ಸಾಗುತ್ತಿದೆ. ರಸ್ತೆ ಇಲ್ಲದ ಕಾರಣ ಅನಾರೋಗ್ಯ ಸಂದರ್ಭದಲ್ಲಿ ರೋಗಿಗಳನ್ನು ಡೋಲಿಯಲ್ಲಿ 8 ಕಿಮೀ ದೂರ ಸಾಗಿಸಲು ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ. ಆಂಬ್ಯುಲೆನ್ಸ್ ಸೇವೆ ಸಿಗದಿರುವುದು ಗರ್ಭಿಣಿಯರ ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಸಾರಿಗೆ ಬಸ್ ಇಲ್ಲದೆ ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ಹೋಗಲು ಸಾಧ್ಯವಾಗದೆ 5ನೇ ತರಗತಿವರೆಗೆ ಮಾತ್ರ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಚುನಾವಣೆಯ ಸಮಯದಲ್ಲಿ ಮಾತ್ರ ಜನಪ್ರತಿನಿಧಿಗಳು ಭೇಟಿ ನೀಡುತ್ತಾರೆ ಎಂಬ ಆರೋಪ ಕೇಳಿಬಂದಿದೆ. ಸೂಕ್ತ ಸೌಕರ್ಯ ಒದಗಿಸಲು ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *