ರಾಕಸಕೊಪ್ಪ ಡ್ಯಾಂ ಖಾಲಿ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ – Kannada News | Belagavis Monsoon Crisis Deepens: Rakaskoppa Dam Runs Dry, City Faces Severe Water Shortage

ಬೆಳಗಾವಿ, ಜೂನ್ 23: ಬೆಳಗಾವಿ ಜಿಲ್ಲೆಯಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ತೀವ್ರ ನೀರಿನ ಬಿಕ್ಕಟ್ಟು ಎದುರಾಗಿದೆ. ನಗರಕ್ಕೆ ಕುಡಿಯುವ ನೀರು ಪೂರೈಸುವ ರಾಕಸಕೊಪ್ಪ ಡ್ಯಾಂ ಸಂಪೂರ್ಣವಾಗಿ ಬರಿದಾಗಿದ್ದು, ಡೆಡ್ ಸ್ಟೋರೇಜ್ ನೀರನ್ನೇ ಬಳಸುವ ಅನಿವಾರ್ಯತೆ ಸೃಷ್ಟಿಯಾಗಿದೆ. ಈ ಪರಿಸ್ಥಿತಿಯಿಂದಾಗಿ ಬೆಳಗಾವಿ ನಗರದಲ್ಲಿ ಪ್ರತಿ 12 ದಿನಗಳಿಗೊಮ್ಮೆ ಮಾತ್ರ ನೀರು ಸರಬರಾಜು ಮಾಡಲಾಗುತ್ತಿದೆ. ಸಾಮಾನ್ಯವಾಗಿ ಮೂರರಿಂದ ಐದು ದಿನಗಳಿಗೊಮ್ಮೆ ನೀರು ಪೂರೈಕೆಯಾಗುತ್ತಿತ್ತು. ಆದರೆ, ಈಗ ನೀರಿನ ಅಭಾವದಿಂದ ಈ ಅವಧಿ ಹೆಚ್ಚಾಗಿದೆ. ಡ್ಯಾಂನಲ್ಲಿ ಇನ್ನು ಕೇವಲ ಎರಡು ವಾರಗಳಷ್ಟು ನೀರು ಮಾತ್ರ ಲಭ್ಯವಿದ್ದು, ಮಳೆ ಬರದಿದ್ದರೆ ಭವಿಷ್ಯದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ.

ರೈತಾಪಿ ವರ್ಗ ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದು, ನಗರದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. ಹಿಡಕಲ್ ಜಲಾಶಯದಲ್ಲೂ ಕೇವಲ 5 ಟಿಎಂಸಿ ನೀರು ಉಳಿದಿದ್ದು, ಒಟ್ಟಾರೆ ಪರಿಸ್ಥಿತಿ ಗಂಭೀರವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಮತ್ತು ಜಿಲ್ಲಾಡಳಿತಕ್ಕೆ ನೀರಿನ ನಿರ್ವಹಣೆ ಸವಾಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *