ರಾಜೀನಾಮೆಗೂ ಮುನ್ನವೇ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು, (ಮೇ 28): ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ರಾಜೀನಾಮೆ ನಿಡುವುದಾಗಿ ಘೋಷಿಸಿದ್ದು, ಮುಂದಿನ ಮುಖ್ಯಮುಂತ್ರಿ ಡಿಕೆ ಶಿವಕುಮಾರ್ (DK Shivakumar) ಆಗಲಿದ್ದಾರೆ. ಆದ್ರೆ, ಸಿದ್ದರಾಮಯ್ಯನವರ ಪದತ್ಯಾಗಕ್ಕೂ ಮುನ್ನವೇ ಅವರ ಆಪ್ತ ಅಧಿಕಾರಿಗಳ ಸ್ಥಾನಪಲ್ಲಟವಾಗಿದೆ. ಹೌದು… ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ , ಸಿಎಂ ವಿಶೇಷ ಕರ್ತವ್ಯಾಧಿಕಾರಿ ರಮೇಶ್ ಪಿ.ಕೋನರೆಡ್ಡಿ, ಸಿಎಂ ಜಂಟಿ ಕಾರ್ಯದರ್ಶಿಯಾಗಿದ್ದ ಟಿ.ಎನ್.ಕೃಷ್ಣಮೂರ್ತಿ ಹಾಗೂ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ  ಅವರನ್ನ ವರ್ಗಾವಣೆ ಮಾಡಲಾಗಿದೆ.

ಮುಖ್ಯಾಂಶಗಳು

  • ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ
  • ಪದತ್ಯಾಗಕ್ಕೂ ಮುನ್ನವೇ ಸಿದ್ದರಾಮಯ್ಯ ಆಪ್ತ ಅಧಿಕಾರಿಗಳ ವರ್ಗಾವಣೆ
  • ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಧಿಕಾರಿ ಸೇರಿದಂತೆ ಹಲವ ಅಧಿಕಾರಿಗಳ ವರ್ಗಾ
  • ರಾಜೀನಾಮೆಗೂ ಮುನ್ನವೇ ವಿವಿಧ ಇಲಾಖೆಗಳಿಗೆ ವರ್ಗಾವಣೆ

ವಿವಿಧ ಆಪ್ತ ಅಧಿಕಾರಿಗಳ ವರ್ಗಾವಣೆ

ಸಿಎಂ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿಯಾಗಿದ್ದ ಕೆಎಎಸ್ ಅಧಿಕಾರಿ ಡಾ.ವೆಂಕಟೇಶಯ್ಯ ಅವರನ್ನು ವರ್ಗಾವಣೆ ಕೃಷಿ ಮಾರಾಟ ಇಲಾಖೆ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಸಿಎಂ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ರಮೇಶ್ ಪಿ.ಕೋನರೆಡ್ಡಿ ಅವರನ್ನು ವಿದ್ಯುತ್ ಪ್ರಸರಣ ನಿಗಮದ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ. ಈ ಮೂಲಕ ಸಿದ್ದರಾಮಯ್ಯ ಪದತ್ಯಾಗಕ್ಕೂ ಮುನ್ನವೇ ತಮ್ಮ ಆಪ್ತ ಅಧಿಕಾರಿಗಳನ್ನು ಆಯಾ ಕಟ್ಟಿನ ಸ್ಥಳಗಳಿಗೆ ನಿಯುಕ್ತಿಗೊಳಿಸಿದ್ದಾರೆ.

ಸಿಎಂ ಜಂಟಿ ಕಾರ್ಯದರ್ಶಿಯಾಗಿದ್ದ ಟಿ.ಎನ್.ಕೃಷ್ಣಮೂರ್ತಿ ನಗರಾಭಿವೃದ್ಧಿ ಇಲಾಖೆ ಜಂಟಿ ಕಾರ್ಯದರ್ಶಿ-2 ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಹಾಗೇ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ಅವರನ್ನ ಕ್ರೈಸ್ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಗೆ ವರ್ಗಾಯಿಸಲಾಗಿದೆ.

ಇದನ್ನೂ ಓದಿ: ಸಿಎಂ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ, ಮಾಧ್ಯಮ ಸಲಹೆಗಾರರ ನೇಮಕ: ಯಾರ್ಯಾರು? ಇಲ್ಲಿದೆ ವಿವರ

ಯಾವುದೇ ಹೊಸ ಸರ್ಕಾರ ಆಡಳಿತಕ್ಕೆ ಬಂದರೆ ತಮಗೆ ಬೇಕಾದ ಅಧಿಕಾರಿಗಳನ್ನು ನೇಮಕ ಮಾಡಿಸಿಕೊಳ್ಳುವುದು ಸಾಮಾನ್ಯ. ಹೀಗಾಗಿ 2023ರಲ್ಲಿ ಎರಡನೇ ಬಾರಿಗೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ವೇಳೆ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಅವರನ್ನು ಗುತ್ತಿಗೆ ಆಧಾರದ ಮೇಲೆ ಸಿಎಂ ಆಪ್ತ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಜೊತೆಗೆ ಕೆಎಎಸ್(ಹಿರಿಯ ಶ್ರೇಣಿ) ಅಧಿಕಾರಿಯಾಗಿರುವ ರಮೇಶ್ ಪಿ.ಕೋನರೆಡ್ಡಿ ಅವರನ್ನು ಸಿಎಂ ವಿಶೇಷ ಕರ್ತವ್ಯಾಧಿಕಾರಿಯಾಗಿ ನೇಮಿಸಲಾಗಿತ್ತು.

ಆದ್ರೆ, ಇದೀಗ ಸಿದ್ದರಾಮಯ್ಯನವರು ಪದತ್ಯಾಗ ಮಾಡುವ ಮೊದಲೇ ಅವರ ಆಪ್ತ ಅಧಿಕಾರಿಗಳನ್ನ ಬೇರೆ ಇಲಾಖೆಗಳಿಗೆ ವರ್ಗಾವಣೆ ಮಾಡಿರುವುದು ಕುತೂಹಲ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 2:36 pm, Thu, 28 May 26

Source link

Leave a Reply

Your email address will not be published. Required fields are marked *