ಜಾತಿ ಗಣತಿ ವರದಿ ಸ್ವೀಕರಿಸಿದ ಸಿದ್ದದರಾಮಯ್ಯ
ಬೆಂಗಳೂರು, (ಮೇ 27): ಕಳೆದ 9 ವರ್ಷಗಳಿಂದ ನಿರಂತರವಾಗಿ ಸಂಚಲನ ಸೃಷ್ಟಿಸಿದ್ದ ಕರ್ನಾಟಕ ಜಾತಿಗಣತಿ ವರದಿಯನ್ನು (Karnataka Caste Census Report) ಸಿಎಂ ಸಿದ್ದರಾಮಯ್ಯ (Siddaramaiah) ಸ್ವೀಕರಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಒಂದು ದಿನ ಮೊದಲೇ ಆಸೆಯದಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ದಪಡಿಸಿದ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ” ಯನ್ನು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸ್ವೀಕರಿಸಿರುವುದು ವಿಶೇಷ. ಇದರೊಂದಿಗೆ ತಾವು ಅಧಿಕಾರಿದಲ್ಲಿದ್ದಾಗಲೇ ಜಾತಿಗಣತಿ ಸ್ವೀಕಾರ ಮಾಡಿದ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇನ್ನು ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವರದಿ (ಜಾತಿ ಗಣತಿ) ಬಹಿರಂಗವಾಗಿದ್ದು, ವರದಿ ಪ್ರಕಾರ ಮುಸ್ಲಿಮರೇ ರಾಜ್ಯದಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಸಮುದಾಯವಾಗಿದೆ.
ಮುಸ್ಲಿಮರೇ ನಂ.1
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್ ಅವರು ಸಿಎಂ ಸಿದ್ದರಾಮಯ್ಯವರಿಗೆ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವರದಿ ನೀಡಿದ್ದು, ಈ ಜಾತಿಗಣತಿ ಪ್ರಕಾರ, ರಾಜ್ಯದಲ್ಲಿ ಮುಸ್ಲಿಂ ಅತಿ ದೊಡ್ಡ ಸಮುದಾಯವಾಗಿದೆ. ಶೇ.14ರಷ್ಟು ಅಂದರೆ ಬರೋಬ್ಬರಿ 75.25 ಲಕ್ಷ ಜಸಂಖ್ಯೆ ಇದ್ದಾರೆ ಎಂದು ವರದಿಯಲ್ಲಿ ಉಲ್ಲೇಖವಾಗಿದೆ.
ಜಾತಿವಾರುಜನಸಂಖ್ಯೆ ವಿವರ
ಇನ್ನು ಮುಸ್ಲಿಮರು 75 ರಿಂದ 80 ಲಕ್ಷ ಜನಸಂಖ್ಯೆಯೊಂದಿಗೆ ಕರ್ನಾಟಕದಲ್ಲಿ ನಂಬರ್ ಒನ್ ಪ್ರಬಲ ಸಮುದಾಯವಾಗಿದೆ. ವೀರಶೈವ ಲಿಂಗಾಯತ ಶೇ.11ರಷ್ಟು 60 ರಿಂದ 65 ಲಕ್ಷ ಜನಸಂಖ್ಯೆ ಹೊಂದಿದ್ದು ಕರ್ನಾಟಕದಲ್ಲಿ ಎರಡನೇ ಅತಿ ದೊಡ್ಡ ಸಮುದಾಯವಾಗಿದ್ದರೆ, ಶೇ.10ರೊಂದಿಗೆ ಒಕ್ಕಲಿಗರು 55 ರಿಂದ 60 ಲಕ್ಷ ಜನಸಂಖ್ಯೆ ಹೊಂದಿದ 3ನೇ ಸಮುದಾಯವಾಗಿದೆ. ಇನ್ನು ಕುರುಬರು ಸಮುದಾಯ ಶೇ.8ರಷ್ಟು ಇದ್ದು, 40 ರಿಂದ 45 ಲಕ್ಷ ಜನಸಂಖ್ಯೆ ಹೊಂದಿಗೆ ರಾಜ್ಯದ 4ನೇ ದೊಡ್ಡ ಸಮುದಾಯವಾಗಿದೆ ಎಂದು ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಜಾತಿವಾರು ಜನಸಂಖ್ಯೆ ಬಗ್ಗೆ ಉಲ್ಲೇಖವಾಗಿದೆ.
ಮುಸ್ಲಿಂ ಒಂದು ಧರ್ಮ ಹಾಗೂ ಮುಸ್ಲಿಮರು ಸಾಮಾಜಿಕವಾಗಿ ನಿರ್ಲಕ್ಷ್ಯಕ್ಕೆ ಒಳಗಾಗಿಲ್ಲ. ಹೀಗಾಗಿ ಅವರಿಗೆ ಮೀಸಲಾತಿ ನೀಡುವ ಅಗತ್ಯವಿಲ್ಲ ಎಂದು ಹೇಳಿ 1974ರಲ್ಲಿ ಹಾವನೂರು ಆಯೋಗದ ವರದಿಯು ಲಿಂಗಾಯತ, ಕ್ರಿಶ್ಚಿಯನ್ ಹಾಗೂ ಮುಸ್ಲಿಮರಿಗೆ ಮೀಸಲಾತಿ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಹೋರಾಟ ನಡೆಸಿದ ಬಳಿಕ 1985ರಲ್ಲಿ ಸುಪ್ರೀಂ ಕೋರ್ಟ್ ಹಾವನೂರು ಆಯೋಗದ ವರದಿಯಲ್ಲೇ ಮುಸ್ಲಿಮರು ಶಿಕ್ಷಣ ಹಾಗೂ ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿರುವುದಾಗಿ ತಿಳಿಸಲಾಗಿದೆ. ಹೀಗಾಗಿ ಎಲ್ಲಾ ಹಿಂದುಳಿದ ವರ್ಗಗಳಂತೆ ಮುಸ್ಲಿಮರನ್ನೂ ಪರಿಗಣಿಸಿ ಮೀಸಲಾತಿಗೆ ಅರ್ಹರನ್ನಾಗಿ ಮಾಡಬೇಕು ಎಂದು ಹೇಳಿತ್ತು. ಬಳಿಕ ನೇಮಕವಾದ ವೆಂಕಟಸ್ವಾಮಿ ಆಯೋಗ ಹಾಗೂ ಚಿನ್ನಪ್ಪರೆಡ್ಡಿ ಆಯೋಗದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗದ ಜಾತಿ ಎಂದೇ ಪರಿಗಣಿಸಲಾಗಿದೆ. ಹೀಗಾಗಿ ಕಾಂತರಾಜು ಆಯೋಗ ಹಾಗೂ ಜಯಪ್ರಕಾಶ್ ಹೆಗ್ಡೆ ನೇತೃತ್ವದ ಆಯೋಗವು ಮುಸ್ಲಿಮರನ್ನು ಜಾತಿ ಎಂದೇ ಪರಿಗಣಿಸಿದ್ದಾರೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮೂಲಗಳು ತಿಳಿಸಿದ್ದವು.