ಬೆಂಗಳೂರು, ಆಗಸ್ಟ್ 4: ಸಚಿವ ಸಂಪುಟ ವಿಸ್ತರಣೆಯ ಬಳಿಕ ಸಚಿವ ಸ್ಥಾನ ಕೈತಪ್ಪಿದ ಕೆಲವು ಕಾಂಗ್ರೆಸ್ ಶಾಸಕರಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಕೆಲವು ಶಾಸಕರು ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಕರೆ ಮಾಡಿ, ರಾಜೀನಾಮೆ ಬೆದರಿಕೆ ಹಾಕುವವರ ವಿವರ ಕೇಳಿದೆ. ಅಲ್ಲದೆ, ರಾಜೀನಾಮೆ ನೀಡಿದರೆ ಅದನ್ನು ತಕ್ಷಣವೇ ಅಂಗೀಕರಿಸುವಂತೆ ಸೂಚಿಸಿದೆ.
ಇದರ ಬೆನ್ನಲ್ಲೇ ಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಎಚ್ಚರಿಕೆ ನೀಡಿ, ರಾಜೀನಾಮೆ ನೀಡಿದರೆ ಕೂಡಲೇ ಅದನ್ನು ಅಂಗೀಕರಿಸಲಾಗುವುದು ಎಂದು ತಿಳಿಸಿದ್ದಾರೆ. ಸಚಿವ ಸ್ಥಾನ ಸಿಗದವರಿಗೆ ನಿಗಮ ಮಂಡಳಿ ಹುದ್ದೆಗಳನ್ನು ನೀಡಲಾಗುವುದು. ಆದರೂ ರಾಜೀನಾಮೆಗೆ ಮುಂದಾದರೆ, ಹೈಕಮಾಂಡ್ ಸೂಚನೆಯಂತೆ ಅದನ್ನು ಸ್ವೀಕರಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಕ್ಷದ ಹಿತಾಸಕ್ತಿ ಎಲ್ಲಕ್ಕಿಂತ ಮುಖ್ಯ ಎಂದು ಸಿಎಂ ಹೇಳಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ