ಆರ್. ಅಶೋಕ್ ಕಿಡಿImage Credit source: PTI
ಬೆಂಗಳೂರು, ಜುಲೈ 22: ಮುಂಗಾರು ಮಳೆಯ ಅಭಾವದಿಂದ ರಾಜ್ಯದಲ್ಲಿ ಭೀಕರ ಬರಗಾಲದ ನಡುವೆಯೂ ಕಾಂಗ್ರೆಸ್ ನಾಯಕರು, ಶಾಸಕರು ಜಾಲಿ ಟ್ರಿಪ್ ಮಾಡ್ತಿದ್ದಾರೆ ಎಂದು ವಿಪಕ್ಷಗಳು ಗಂಭೀರ ಆರೋಪ ಮಾಡಿವೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇದೇ ಹಣೆಬರಹ. ಬರಗಾಲ ಬಂದಾಗ ಸರ್ಕಾರ ಯಾವುದೇ ಕ್ರಮಕೈಗೊಳ್ಳಲ್ಲ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಮುಂಜಾಗ್ರತಾ ಕ್ರಮ ಕೈಗೊಂಡಿದ್ವಿ. ಬಿಜೆಪಿಯ ಕೆಲಸವನ್ನು ನೋಡಿ ಕಾಂಗ್ರೆಸ್ ಕಲಿಯಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಳೆ ಬೆಳೆಯಬೇಡಿ ಅಂತಾರೆ. ರೈತರು ಬೆಳೆ ಬೆಳೆಯದೆ ಏನು ಮಾಡಬೇಕು? ಹಾಗಾದ್ರೆ ರೈತರಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಿ ಬಿಡಿ. ಕಾವೇರಿ ನದಿ ನೀರು ತಮಿಳುನಾಡಿಗೆ ಹರಿದು ಹೋಗುತ್ತಿದೆ ಎಂದೂ ಅವರು ಆರೋಪಿಸಿದ್ದಾರೆ. ಬರ ಪೀಡಿತವೆಂದು ಘೋಷಣೆ ಮಾಡಿದರೆ ಕೇಂದ್ರ ಸರ್ಕಾರ ನಿಯೋಗ ಕಳಿಸಿ ವರದಿ ಪಡೆದು ಹಣ ಕೊಡುತ್ತೆ. ಬರ ಅಂತಾ ಘೋಷಣೆ ಮಾಡದಿದ್ದರೆ ಈ ಅನುದಾನ ಸಿಗುವುದಿಲ್ಲ. ಕಾಂಗ್ರೆಸ್ಗೆ ಕಾಳಜಿ ಇದ್ದರೆ ಕೂಡಲೇ ಬರ ಅಂತಾ ಘೋಷಿಸಲಿ. SDRF ಹಣವನ್ನು ಯಾವುದಕ್ಕೆ ಬಳಕೆ ಮಾಡಿದ್ದಾರೋ ಗೊತ್ತಿಲ್ಲ. ಬರ ಘೋಷಣೆ ಮಾಡೋ ಬದಲು ದೆಹಲಿಯಲ್ಲಿ ಕುಳಿತಿದ್ದಾರೆ. ರಾಜ್ಯ ಸರ್ಕಾರ 1 ಲಕ್ಷ ರೂ.ವರೆಗೆ ರೈತರ ಸಾಲಮನ್ನಾ ಮಾಡಬೇಕು ಎಂದವರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ; ಕಾರಣ ಕೊಟ್ಟ ಸಿಎಂ ಡಿಕೆ ಶಿವಕುಮಾರ್
ಎಕ್ಸ್ ಪೋಸ್ಟ್ ಮೂಲಕ ಜೆಡಿಎಸ್ ವಾಗ್ದಾಳಿ
ಬೆಳೆಯೂ ಇಲ್ಲ, ಕುಡಿಯಲು ನೀರೂ ಇಲ್ಲ! ಅನ್ನದಾತನ ಕಣ್ಣೀರು ಒರೆಸುವವರು ಯಾರು ?
ರಾಜ್ಯದಲ್ಲಿನ 36,202 ಕೆರೆಗಳ ಪೈಕಿ ಕೇವಲ 584 ಕೆರೆಗಳು ಮಾತ್ರ ಭರ್ತಿಯಾಗಿದ್ದು, ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಳ್ಳುವ ಹಂತ ತಲುಪಿವೆ. ಗ್ರಾಮೀಣ ಭಾಗದ ಜೀವನಾಡಿಯಾಗಿದ್ದ ಕೆರೆಗಳು ಬರಿದಾಗಿರುವುದು ರೈತರ ಪಾಲಿಗೆ ಮರಣಶಾಸನವಾಗುತ್ತಿದೆ.
👉🏻 5,862… pic.twitter.com/PjvWsFmtct
— Janata Dal Secular (@JanataDal_S) July 22, 2026
ರಾಜ್ಯದಲ್ಲಿನ 36,202 ಕೆರೆಗಳ ಪೈಕಿ ಕೇವಲ 584 ಕೆರೆಗಳು ಮಾತ್ರ ಭರ್ತಿಯಾಗಿದ್ದು, ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಳ್ಳುವ ಹಂತ ತಲುಪಿವೆ.ಗ್ರಾಮೀಣ ಭಾಗದ ಜೀವನಾಡಿಯಾಗಿದ್ದ ಕೆರೆಗಳು ಬರಿದಾಗಿರುವುದು ರೈತರ ಪಾಲಿಗೆ ಮರಣಶಾಸನವಾಗುತ್ತಿದೆ. 5,862 ಕೆರೆಗಳು ಸಂಪೂರ್ಣ ಖಾಲಿಯಾಗಿದ್ದು, 734 ಹಳ್ಳಿಗಳಿಗೆ ಟ್ಯಾಂಕರ್ ನೀರೇ ಆಸರೆಯಾಗಿದೆ. ರೈತರ ಹಿತ ಕಾಯುವಲ್ಲಿ ಸಂಪೂರ್ಣ ವಿಫಲವಾಗಿರುವ ಕಾಂಗ್ರೆಸ್ ಸರ್ಕಾರ ತಕ್ಷಣವೇ ಬರ ಪೀಡಿತ ಪ್ರದೇಶಗಳನ್ನು ಘೋಷಿಸಿ ರೈತರ ಸಾಲ ಮನ್ನಾ ಮಾಡುವುದರ ಜೊತೆಗೆ ಪರಿಹಾರ ನೀಡಬೇಕು ಎಂದು ಎಕ್ಸ್ ಪೋಸ್ಟ್ ಮೂಲಕ ಜೆಡಿಎಸ್ ಆಗ್ರಹಿಸಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On – 2:37 pm, Wed, 22 July 26
