Headlines

ರಾಜ್ಯದಲ್ಲಿ ಹೆಚ್ಚುತ್ತಿದೆ ಬಾಂಬ್ ಬೆದರಿಕೆ: ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ಗೆ ಹುಸಿ ಬಾಂಬ್ ಬೆದರಿಕೆ – Kannada News | Karnataka Bomb Threats: Bengaluru City Civil Court Targeted in Email Hoax, Police Investigate

ಬೆಂಗಳೂರು, ಮಾ.3: ರಾಜ್ಯದಲ್ಲಿ ಬಾಂಬ್ ಬೆದರಿಕೆಗಳು ಹೆಚ್ಚುತ್ತಿದೆ. ಇತ್ತೀಚಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ, ಶಾಲೆ, ಇದೀಗ ಕೋರ್ಟ್​​​ಗೂ ಬೆದರಿಕೆ ಬರುತ್ತಿದೆ. ಇಂದು ಮಧ್ಯಾಹ್ನ ಕಲಬುರ್ಗಿಯ ಜಿಲ್ಲಾ ಕೋರ್ಟ್​​ಗೆ ಬೆದರಿಕೆ ಬಂದಿತ್ತು. ಇದೀಗ ರಾಜಧಾನಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣವನ್ನು ಸ್ಫೋಟಿಸುವುದಾಗಿ ಅಪರಿಚಿತರು ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ಮತ್ತು ಭದ್ರತಾ ಪಡೆಗಳು ಇಡೀ ಕೋರ್ಟ್ ಆವರಣವನ್ನು ಜಾಲಾಡಿದ್ದು, ಅಂತಿಮವಾಗಿ ಇದೊಂದು ‘ಹುಸಿ ಬಾಂಬ್ ಬೆದರಿಕೆ’ (Hoax Call) ಎಂದು ದೃಢಪಟ್ಟಿದೆ. ಇಂದು (ಮಾರ್ಚ್ 3, 2026) ಬೆಳಿಗ್ಗೆ ಕೋರ್ಟ್‌ನ ಅಧಿಕೃತ ಇ-ಮೇಲ್ ವಿಳಾಸಕ್ಕೆ ಸಂದೇಶ ಬಂದಿತ್ತು. ಇನ್ನು ಈ ಬೆದರಿಕೆ ಇ-ಮೇಲ್ ತಮಿಳು ಭಾಷೆಯಲ್ಲಿದೆ.

ಸುದ್ದಿ ತಿಳಿಯುತ್ತಿದ್ದಂತೆ ಹಲಸೂರು ಗೇಟ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಬಾಂಬ್ ನಿಷ್ಕ್ರಿಯ ದಳ (BDS) ಮತ್ತು ಶ್ವಾನದಳದೊಂದಿಗೆ ಕೋರ್ಟ್‌ನ ಪ್ರತಿ ಕೊಠಡಿ, ಕಾರಿಡಾರ್ ಮತ್ತು ಪಾರ್ಕಿಂಗ್ ಪ್ರದೇಶಗಳಲ್ಲಿ ತೀವ್ರ ಶೋಧ ನಡೆಸಲಾಯಿತು.

ಇದನ್ನೂ ಓದಿ: ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಓಡಿದ ವಕೀಲರು

ಸುದೀರ್ಘ ಪರಿಶೀಲನೆಯ ನಂತರ ಯಾವುದೇ ಅನುಮಾನಾಸ್ಪದ ವಸ್ತುಗಳು ಅಥವಾ ಸ್ಫೋಟಕಗಳು ಪತ್ತೆಯಾಗಿಲ್ಲ. ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಲು ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇ-ಮೇಲ್ ಕಳುಹಿಸಿದ ಕಿಡಿಗೇಡಿಗಳ ಪತ್ತೆಗಾಗಿ ಸೈಬರ್ ಕ್ರೈಂ ವಿಭಾಗದ ನೆರವು ಪಡೆಯಲಾಗುತ್ತಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *