ರಾಜ್ಯದ 5 ಜಿಲ್ಲೆಗಳಲ್ಲಿ 40 ಡಿಗ್ರಿ ದಾಟಿದ ತಾಪಮಾನ: ಬಿಸಿಲಿನ ಝಳದಿಂದ ಪಾರಾಗಲು ಜನರ ನಾನಾ ಕಸರತ್ತು – Kannada News | Karnataka Heatwave: Five Districts Cross 40 Degrees Celsius as Residents Struggle

ಬೆಂಗಳೂರು, ಏಪ್ರಿಲ್​ 19: ರಾಜ್ಯದಲ್ಲಿ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದ್ದು, ಪ್ರಮುಖವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳು ಅಕ್ಷರಶಃ ಕೆಂಡದಂತಾಗಿವೆ. ಐದು ಜಿಲ್ಲೆಗಳಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದ್ದು, ಜನರು ಬಿಸಿಲಿನಿಂದ ತತ್ತರಿಸಿದ್ದಾರೆ. ಗದಗ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸೂರ್ಯನ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗಿಂತ ಅಧಿಕ ದಾಖಲಾಗಿದೆ. ಮನೆಯಲ್ಲಿದ್ದರೂ ಫ್ಯಾನ್ ಮತ್ತು ಕೂಲರ್‌ಗಳಿಂದ ಬಿಸಿ ಗಾಳಿ ಬರುತ್ತಿರುವುದರಿಂದ ಜನರು ನೆಮ್ಮದಿ ಕಳೆದುಕೊಂಡಿದ್ದಾರೆ. ಮಧ್ಯಾಹ್ನದ ವೇಳೆ ಜನರು ಮನೆಯಿಂದ ಹೊರಬರಲು ಭಯಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಬೀದರ್ ಜಿಲ್ಲೆಯ ಮರಕಲ್ ಗ್ರಾಮದ ನಿವಾಸಿಗಳು ಬಿಸಿಲಿನಿಂದ ಪಾರಾಗಲು ಹೊಸ ಮಾರ್ಗ ಕಂಡುಕೊಂಡಿದ್ದಾರೆ. ಮನೆಗಳ ಮೇಲ್ಛಾವಣಿಯ ಮೇಲೆ ಟಾರ್ಪಾಲ್ ಹಾಕಿ ನೀರು ತುಂಬಿಸುವ ಮೂಲಕ ಮನೆಯನ್ನು ತಂಪಾಗಿರಿಸಿಕೊಳ್ಳುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Source link

Leave a Reply

Your email address will not be published. Required fields are marked *