ರಾಜ್ಯ ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆ: ಕುತೂಹಲ ಮೂಡಿಸಿದ ಅತ್ಯಾಪ್ತರ ಜೊತೆಗಿನ ಸಿಎಂ ಸಭೆ – Kannada News | CM Siddaramaiah pressured by key allies amid Karnataka Congress political crisis

ಬೆಂಗಳೂರು, ಏಪ್ರಿಲ್​​ 24: ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದ್ದು, ಕಾಂಗ್ರೆಸ್​​ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರೇ ಟಾರ್ಗೆಟ್​​ ಆಗುತ್ತಿರುವ ಆರೋಪ ಕೇಳಿಬಂದಿದೆ. ಈ ನಡುವೆ ಸಿಎಂ ಹಾಗೂ ಅತ್ಯಾಪ್ತ ಸಚಿವರಿಂದ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯ ಖಾಸಗಿ ಕಟ್ಟಡದಲ್ಲಿ ಪ್ರತ್ಯೇಕ ಸಭೆ ನಡೆದಿರೋದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಸಚಿವರಾದ ಭೈರತಿ ಸುರೇಶ್, ಡಾ.ಜಿ.ಪರಮೇಶ್ವರ್, ಮಹದೇವಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್, ದಿನೇಶ್ ಗುಂಡೂರಾವ್ ಭಾಗಿಯಾಗಿದ್ದರು.

ಸಭೆಯಲ್ಲಿ ಚರ್ಚೆಯಾಗಿದ್ದೇನು?

ಆಪ್ತರೇ ಟಾರ್ಗೆಟ್​​ ಆಗುತ್ತಿದ್ದರೂ ಸಿಎಂ ಮೌನವಾಗಿರು ವಿಚಾರದ ಬಗ್ಗೆ ಸಭೆಯಲ್ಲಿ ಸುದೀರ್ಘ ಸಮಾಲೋಚನೆ ನಡೆದಿದೆ. ಇದು ಹೀಗೆ ಮುಂದುವರಿದರೆ ಪಕ್ಷದ ಹಿರಿಯ ನಾಯಕರ ಅಸ್ತಿತ್ವಕ್ಕೂ ಕುತ್ತು ಬರಬಹುದು. ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವುದು ಸರಿಯಲ್ಲ. ಇದರಿಂದ 2028ರ ಚುನಾವಣೆ ವೇಳೆ ಪಕ್ಷದ ಮೇಲೆ ಮುನಿಸಿಕೊಂಡು ಸಮುದಾಯಗಳು ದೂರ ಸರಿಯುತ್ತವೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. ಹಿರಿಯ ನಾಯಕರ ಅನುಭವಗಳಿಗೆ ವಿರುದ್ಧವಾಗಿ ಪಕ್ಷದಲ್ಲಿ ಕೆಲವರು ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಈ ನಡುವೆ ಸಿದ್ದರಾಮಯ್ಯ ಮೌನದಿಂದ ಕಾಂಗ್ರೆಸ್​ ಪಕ್ಷಕ್ಕೆ ಡ್ಯಾಮೇಜ್ ಆಗುತ್ತಿದೆ. ಹೀಗಾಗಿ ತಾವು ತಕ್ಷಣ ಮಧ್ಯಪ್ರವೇಶ ಮಾಡಬೇಕೆಂದು ಸಿದ್ದರಾಮಯ್ಯನವರ ಮೇಲೆ ಸಭೆಯಲ್ಲಿ ಒತ್ತಡ ಹೇರಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಸೈಲೆಂಟ್​​ ಆಗಲು ಮಾಟ ಮಂತ್ರ ಕಾರಣವಾ?; ಕಾಂಗ್ರೆಸ್​​ನಲ್ಲಿಯೇ ಹೀಗೊಂದು ಹೊಸ ಚರ್ಚೆ

ಸಿಎಂ ಮತ್ತು ಆಪ್ತರ ಸಭೆ ಬಗ್ಗೆ ಡಿಕೆಶಿ ಹೇಳಿದ್ದೇನು?

ಈ ನಡುವೆ ದೆಹಲಿಗೆ ಭೇಟಿ ನೀಡಿರುವ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜ್ಯ ರಾಜಕಾರಣದ ಇತ್ತೀಚಿನ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿದ್ದಾರೆ. ಸಿಎಂ ಆಪ್ತ ಸಚಿವರು ನಡೆಸಿದ ಸಭೆಯ ಬಗ್ಗೆ ತನಗೆ ಮಾಹಿತಿ ಇಲ್ಲ. ಯಾರು ಆಪ್ತರು, ಯಾರು ಆಪ್ತರಲ್ಲ ಎಂಬುದು ತಮಗೆ ತಿಳಿದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಅಗತ್ಯವಿದೆ. ಹೀಗಾಗಿ ಮೇ 20ರೊಳಗೆ ಏನಾದರೂ ಅನಿರೀಕ್ಷಿತ ಬೆಳವಣಿಗೆಗಳು ನಡೆಯಬಹುದು ಎಂದು ಡಿ.ಕೆ.ಶಿವಕುಮಾರ್ ಸೂಚ್ಯವಾಗಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *