
ಬೆಂಗಳೂರು, ಜುಲೈ 14: ಸಚಿವ ಸ್ಥಾನಕ್ಕೆ 100ರಿಂದ 150 ಕೋಟಿ ರೂಪಾಯಿ ಇದ್ದು, ಇದು ಪೇಮೆಂಟ್ ಸಚಿವ ಸ್ಥಾನದ ಸರ್ಕಾರ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಬರುವ ಸಾಧ್ಯತೆ ಇದೆ ಎಂದು ಭವಿಷ್ಯವನ್ನೂ ನುಡಿದಿರುವ ಅವರು, ನಾನೇ 5 ವರ್ಷ ಸಿಎಂ ಅಂತಿದ್ದ ಸಿದ್ದರಾಮಯ್ಯ ಎಲ್ಲಿ ಹೋದರು? ಸಿದ್ದರಾಮಯ್ಯ ಬದಲಾಗ್ತಾರೆ ಅಂತಾ ನಾನು ಹೇಳಿದ್ದು ನಿಜ ಆಗಿದೆ. ಸಚಿವರೇ ಇಲ್ಲದೆ ಸದನ ಕರೆಯಲು ಇವರು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.