Headlines

ರಾಜ್ಯ ಸಾರಿಗೆ ನೌಕರರ ವೇತನ ಹೆಚ್ಚಿಸಿ ಸರ್ಕಾರ ಆದೇಶ, ಎಷ್ಟು ಹೆಚ್ಚಳ? ಯಾವಾಗಿನಿಂದ ಜಾರಿಗೆ? – Kannada News | Karnataka Government Hikes transport employees Salary, Effect From July 2026

ಬೆಂಗಳೂರು,ಜುಲೈ 02): ರಾಜ್ಯ ಸರ್ಕಾರ (Karnataka Government) ಸಾರಿಗೆ ನೌಕರರಿಗೆ (Transport Employees) ಸಿಹಿ ಸುದ್ದಿ ನೀಡಿದ್ದು, ಕೊನೆಗೂ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ತಿಂಗಳಿನಿಂದಲೇ KSRTC, BMTC, NWKRTC, KKRTC ಸಿಬ್ಬಂದಿಯ ಮೂಲ ವೇತನವನ್ನು 12.5%ರಷ್ಟು ಹೆಚ್ಚಿಸಿದ್ದು, 2025ರ ಮಾರ್ಚ್ 31ರ ಮೂಲ ವೇತನದ ಮೇಲೆ ಅನ್ವಯವಾಗಲಿದೆ. ಇನ್ನು 2026ರ ಜುಲೈ 1ರ ವೇತನದಲ್ಲಿ ಜಾರಿಗೆ ಬರುವಂತೆ ಆದೇಶಿಸಿದೆ. ಇದು 1.05 ಲಕ್ಷ ಸಿಬ್ಬಂದಿಗೆ ಅನುಕೂಲವಾಗಲಿದ್ದು, ಇದರಿಂದ ಸರ್ಕಾರಕ್ಕೆ ತಿಂಗಳಿಗೆ ಹೆಚ್ಚುವರಿಯಾಗಿ 72.80 ಕೋಟಿ ರೂಪಾಯಿ ಹೊರೆಯಾಗಲಿದೆ.

1.05 ಲಕ್ಷ ನೌಕರರಿಗೆ ಪ್ರಯೋಜನ

ರಾಜ್ಯದ ಸಾರಿಗೆ ನಿಗಮಗಳಲ್ಲಿ ಒಟ್ಟು ಸುಮಾರು 1.05 ಲಕ್ಷ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ವೇತನ ಹೆಚ್ಚಳದಿಂದ ಅವರೆಲ್ಲರಿಗೂ ಪ್ರಯೋಜನವಾಗಲಿದೆ. ಚಾಲಕರು, ಕಾರ್ಯನಿರ್ವಾಹಕರು ಮತ್ತು ಆಡಳಿತಾಧಿಕಾರಿಗಳು ಸೇರಿದಂತೆ ಎಲ್ಲಾ ವಿಭಾಗದ ನೌಕರರು ಈ ವೇತನ ಪರಿಷ್ಕರಣೆಯ ವ್ಯಾಪ್ತಿಗೆ ಒಳಪಡುತ್ತಾರೆ.

ಇದನ್ನೂ ಓದಿ: ಹಿರಿಯ IAS ಅಧಿಕಾರಿಗಳ ವರ್ಗಾವಣೆ: ಹೊಸ ಪ್ರಜಾಸೇವೆ ಇಲಾಖೆಗೆ ಪ್ರಧಾನ ಕಾರ್ಯದರ್ಶಿ ನೇಮಕ

ಹಿಂಬಾಕಿ ಹಣದ ಮೊದಲ ಕಂತು ಬಿಡುಗಡೆ

ಈಗಾಗಲೇ ನೌಕರರಿಗೆ ಪಾವತಿಸಬೇಕಾಗಿದ್ದ ಹಳೆಯ ವೇತನದ ಹಿಂಬಾಕಿ ಮೊತ್ತದ ಮೊದಲ ಕಂತಿನ ಹಣವನ್ನು ಸರ್ಕಾರವು ಬಿಡುಗಡೆ ಮಾಡಿದೆ. ಉಳಿದ ಹಿಂಬಾಕಿ ಮೊತ್ತವನ್ನು ಮುಂದಿನ ಕೆಲವೇ ತಿಂಗಳುಗಳಲ್ಲಿ ಹಂತ ಹಂತವಾಗಿ ಪಾವತಿಸಲಾಗುವುದು ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಜುಲೈ ತಿಂಗಳ ವೇತನದಲ್ಲಿ ಪರಿಷ್ಕೃತ ವೇತನ ಜಾರಿಗೆ ಬರುವಂತೆ ಪಾವತಿಸಲು ಸರ್ಕಾರವು ಆದೇಶ ಹೊರಡಿಸಿದ್ದು, ಈ ತಿಂಗಳಿಂದ ನೌಕರರ ಖಾತೆಗಳಿಗೆ ಪರಿಷ್ಕೃತ ವೇತನ ಜಮೆಯಾಗಲಿದೆ.

ಸಾರಿಗೆ ಕಾರ್ಮಿಕರು ಕಳೆದ ಹಲವು ತಿಂಗಳುಗಳಿಂದ ವೇತನ ಹೆಚ್ಚಳಕ್ಕಾಗಿ ಹೋರಾಟ ನಡೆಸುತ್ತಿದ್ದರು. ವಿವಿಧ ಸಾರಿಗೆ ಸಂಘಗಳು ಮತ್ತು ಒಕ್ಕೂಟಗಳು ಸರ್ಕಾರದ ಮೇಲೆ ಒತ್ತಡ ಹೇರಲು ಮುಷ್ಕರಗ ನಡೆಸಿದ್ದವು. ಅಂತಿಮವಾಗಿ ಸರ್ಕಾರವು ಅವರ ಬೇಡಿಕೆಗೆ ಮಣಿದು, ಈ ಐತಿಹಾಸಿಕ ವೇತನ ಪರಿಷ್ಕರಣೆಗೆ ಅನುಮೋದನೆ ನೀಡಿದೆ. ರಾಮಲಿಂಗಾರೆಡ್ಡಿ ಅವರು ಈ ಹಿಂದೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಸಾರಿಕೆ ಸಚಿವರಾಗಿದ್ದಾಗ ನೌಕರರ ವೇತನ ಹೆಚ್ಚಳಕ್ಕೆ ಆದೇಶಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 5:03 pm, Thu, 2 July 26

Source link

Leave a Reply

Your email address will not be published. Required fields are marked *