ರಾಯಚೂರು: ಏಕಾಏಕಿ ಕುಸಿದ ಕಟ್ಟಡ​​ದ ಗೋಡೆ; ನಾಲ್ವರ ಪೈಕಿ ಇಬ್ಬರು ಸಾವು – Kannada News | Devadurga Building Collapse: 2 Dead, 2 Injured in Commercial Complex Tragedy

ರಾಯಚೂರು, ಜೂನ್​​ 28: ಜಿಲ್ಲೆಯ ದೇವದುರ್ಗ ಪಟ್ಟಣದ ಬಸ್ ನಿಲ್ದಾಣದ ಬಳಿ ಇಂದು ಭೀಕರ ದುರಂತವೊಂದು ಸಂಭವಿಸಿದೆ. ಜನನಿಬಿಡ ಪ್ರದೇಶದಲ್ಲಿದ್ದ ಕಮರ್ಷಿಯಲ್ ಕಾಂಪ್ಲೆಕ್ಸ್ ಕಟ್ಟಡದ ಮೆಟ್ಟಿಲು ಹಾಗೂ ಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು (death), ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ದೇವದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು.

ನಡೆದಿದ್ದೇನು? 

ನಾಗರಾಜ್ ಕ್ಯಾದಿಗೇರಾ(26) ಮತ್ತು ರವಿಕುಮಾರ್(27) ಮೃತ ದುರ್ದೈವಿಗಳು. ಇನ್ನು ಉಮೇಶ್ ಹಾಗೂ ಅಭಿಷೇಕ್ ಎಂಬುವವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಸೂರ್ಯಾಸ್ತ ತೋರಿಸುವ ಭರದಲ್ಲಿ ಎಡವಟ್ಟು: ಬೆಟ್ಟದಿಂದ 50 ಅಡಿ ಪ್ರಪಾತಕ್ಕೆ ಬಿದ್ದ ಉಪನ್ಯಾಸಕ!

ಈ ಕಮರ್ಷಿಯಲ್ ಕಾಂಪ್ಲೆಕ್ಸ್ ಬಸ್ ನಿಲ್ದಾಣದ ಬಳಿಯಿದೆ. ಪ್ರತಿನಿತ್ಯದಂತೆ ಇಂದು ಕೂಡ ವಿವಿಧ ಮಳಿಗೆಗಳಲ್ಲಿ ವ್ಯಾಪಾರ-ವಹಿವಾಟು ಎಂದಿನಂತೆ ಜರುಗುತ್ತಿತ್ತು. ಆದರೆ, ದುರದೃಷ್ಟವಶಾತ್ ಕಟ್ಟಡದ ಮೆಟ್ಟಿಲುಗಳು ಹಾಗೂ ಅದರ ಗೋಡೆ ಏಕಾಏಕಿ ಕುಸಿದು ಬಿದ್ದಿದೆ. ಈ ಭೀಕರ ಅವಘಡ ಸಂಭವಿಸಿದಾಗ ಅದೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ನಾಲ್ವರು ಯುವಕರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಪರಿಣಾಮ, ಇಬ್ಬರು ಯುವಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆ ನಡೆದ ತಕ್ಷಣ ದೇವದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಮಕ್ಕಳ ಯೂನಿಫಾರ್ಮ್, ಪಠ್ಯಪುಸ್ತಕ ಬೆಂಕಿಗಾಹುತಿ

ಇನ್ನು ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮಾ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದರು. ಮೃತರ ಕುಟುಂಬಕ್ಕೆ ಸಾಂತ್ವ ಹೇಳಿದರು. ಬಳಿಕ ಗಾಯಾಳುಗಳ ಆರೋಗ್ಯ ಸ್ಥಿತಿ ವಿಚಾರಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *