
ಬೆಂಗಳೂರು, ಏಪ್ರಿಲ್ 01: ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವ ಇಂದು ನಡೆಯಲಿದೆ. ಸಕಲ ಸಿದ್ಧತೆ ಮಾಡಲಾಗಿದೆ. ಈ ಮಧ್ಯೆ ಕರಗ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕರಗ ಸಮಿತಿಯ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿಯನ್ನು ಬೆಂಗಳೂರಿನ ಹೆಚ್ಎಎಲ್ ಏರ್ಪೋರ್ಟ್ನಲ್ಲಿ ಭೇಟಿ ಮಾಡಿ ಶುಭ ಹಾರೈಸಿದ್ದಾರೆ. ಮುಂದಿನ ದಿನಗಳಲ್ಲಿ ದೇಗುಲಕ್ಕೆ ಭೇಟಿ ನೀಡುವ ಭರವಸೆ ಕೂಡ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮುರ್ಮು ಅವರಿಗೆ ಶ್ರೀಧರ್ಮರಾಯ ಸ್ವಾಮಿ ದೇವಾಲಯದಿಂದ ಕರಗದ ವಸ್ತ್ರವನ್ನು ನೀಡಲಾಗಿದೆ. ಈ ಬಗ್ಗೆ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿ ಮಾತನಾಡಿದ್ದು, ರಾಷ್ಟ್ರಪತಿಗಳನ್ನು ಭೇಟಿ ಮಾಡಿದೆ. ನಾನೇ ಅಧ್ಯಕ್ಷ ಎಂದು ಹೇಳಿದೆ. ದೇವಸ್ಥಾನದ ಮಹಿಮೆ ಹೇಳಿದೆ. ಒಂದು ದಿನ ದೇವಸ್ಥಾನಕ್ಕೆ ಬರುತ್ತೇನೆ, ಜನರಿಗೆ ನನ್ನ ಶುಭಹಾರೈಕೆ ತಿಳಿಸಿ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.