ದೆಹಲಿ, ಫೆಬ್ರವರಿ 12: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಡಿ.ಕೆ. ಶಿವಕುಮಾರ್ ಮತ್ತು ರಾಹುಲ್ ಗಾಂಧಿ ನಡುವೆ ಮಹತ್ವದ ಭೇಟಿ ನಡೆದಿದೆ. ಟಿವಿ9ಗೆ ಲಭ್ಯವಾದ ಮಾಹಿತಿಯ ಪ್ರಕಾರ, ರಾಹುಲ್ ಗಾಂಧಿ ನಿರ್ಧಾರ ಡಿ..ಕೆ ಶಿವಕುಮಾರ್ ಅವರ ಮುಖ್ಯಮಂತ್ರಿ ಭವಿಷ್ಯಕ್ಕೆ ನಿರ್ಣಾಯಕವಾಗಿದೆ. ಸೋನಿಯಾ ಗಾಂಧಿ ಅವರು ಡಿ.ಕೆ. ಶಿವಕುಮಾರ್ ಪರವಾಗಿದ್ದಾರೆ. ಆದರೆ, ರಾಹುಲ್ ಗಾಂಧಿ ಅವರನ್ನು ಒಪ್ಪಿಸುವುದೇ ಈಗ ಡಿಕೆಶಿಗೆ ಸವಾಲಾಗಿದೆ. ಹೀಗಾಗಿ ಮುಂದಿನ 2028ರ ವಿಧಾನಸಭಾ ಚುನಾವಣೆ ಮತ್ತು 2029ರ ಲೋಕಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ನಾಯಕತ್ವ ಬದಲಾವಣೆಯ ಅಗತ್ಯವನ್ನು ರಾಹುಲ್ ಗಾಂಧಿಗೆ ಮನವರಿಕೆ ಮಾಡಲು ಡಿ.ಕೆ. ಶಿವಕುಮಾರ್ ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.