ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ರಫೀಕುಲ್ ಇಸ್ಲಾಂ ಪ್ರತಿಕ್ರಿಯೆ – Kannada News | AIUDF leader Rafiqul Islam says Congress needs to make a sacrifice to wipe out BJP

ಗುವಾಹಟಿ, ಫೆಬ್ರವರಿ 23: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ (Mani Shankar Aiyar) ಇಂದು ರಾಹುಲ್ ಗಾಂಧಿ ಇಂಡಿಯ ಬ್ಲಾಕ್ ನಾಯಕನ ಸ್ಥಾನದಿಂದ ಕೆಳಗೆ ಇಳಿಯಬೇಕೆಂದು ಹೇಳಿಕೆ ನೀಡಿದ್ದು ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ AIUDF ನಾಯಕ ರಫೀಕುಲ್ ಇಸ್ಲಾಂ, “ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಅವರ ಹೇಳಿಕೆಗಳನ್ನು ರಾಹುಲ್ ಗಾಂಧಿ ಎಷ್ಟು ಗಂಭೀರವಾಗಿ ಪರಿಗಣಿಸುತ್ತಾರೆಂದು ನನಗೆ ತಿಳಿದಿಲ್ಲ. ಅವರು ತುಂಬಾ ಪ್ರಬುದ್ಧರಾಗಿದ್ದಾರೆ. ರಾಹುಲ್ ಗಾಂಧಿ ಇಂಡಿಯ ಬ್ಲಾಕ್‌ನ ಅಧ್ಯಕ್ಷರಾಗಿದ್ದರೆ ಮತ್ತು ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಿದರೆ ಇತರೆ ಮಿತ್ರಪಕ್ಷಗಳು ಅವರನ್ನು ಬೆಂಬಲಿಸುತ್ತಾರೆಯೇ? ಈಗ ವರ್ಷಗಳೇ ಕಳೆದಿವೆ. ನಿಧಾನವಾಗಿ, ಇಂಡಿಯ ಬ್ಲಾಕ್ ಮೂಲೆಗುಂಪಾಗಿ ಬಿಜೆಪಿ ಆಡಳಿತವನ್ನು ಮುಂದುವರಿಸುತ್ತದೆ. ಆದ್ದರಿಂದ, ಮಣಿಶಂಕರ್ ಅಯ್ಯರ್ ಹೇಳಿದ್ದು ಸರಿ. ಕಾಂಗ್ರೆಸ್ ಅದರಲ್ಲೂ ವಿಶೇಷವಾಗಿ ರಾಹುಲ್ ಗಾಂಧಿ ಇತರರನ್ನು ಮುಂದಕ್ಕೆ ಬಿಟ್ಟು ಬಿಜೆಪಿಯನ್ನು ಅಳಿಸಿ ಹಾಕಬೇಕು. ಇದಕ್ಕೆ ಕಾಂಗ್ರೆಸ್ ತ್ಯಾಗ ಮಾಡಬೇಕಾಗಿದೆ. ರಾಹುಲ್ ಗಾಂಧಿಯನ್ನು ಅವರನ್ನು ಬೆಂಬಲಿಸಲು ಯಾರೂ ಇರುವುದಿಲ್ಲ. ಮಮತಾ ದೀದಿ, ಕೇಜ್ರಿವಾಲ್, ಅಖಿಲೇಶ್, ಸ್ಟಾಲಿನ್ ಇರುವುದಿಲ್ಲ. ಕೇವಲ 100 ಸ್ಥಾನಗಳಿಂದ ಸರ್ಕಾರ ರಚನೆಯಾಗಲು ಸಾಧ್ಯವಿಲ್ಲ. ಮಣಿಶಂಕರ್ ಅಯ್ಯರ್ ಹೇಳಿದ್ದು ಸರಿ ಎಂದು ನಾನು ಭಾವಿಸುತ್ತೇನೆ. ಅಖಿಲೇಶ್ ಯಾದವ್, ಕೇಜ್ರಿವಾಲ್, ಸ್ಟಾಲಿನ್ ಮತ್ತು ತೇಜಸ್ವಿ ಯಾದವ್‌ರಂತಹ ಜನರಿಗೆ ಮೈತ್ರಿಕೂಟದ ನಾಯಕನ ಸ್ಥಾನ ನೀಡಬೇಕು” ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *